Job Description: ಬಿಹಾರದಲ್ಲಿ ಇತ್ತೀಚಿಗೆ ನಡೆದ ಚುನಾವಣೆಯ ಫಲಿತಾಂಶದಲ್ಲಿ NDA ಮೈತ್ರಿಕೂಟದ ಪಕ್ಷಗಳು ಅಧಿಕಾರಕ್ಕೆ ಬೇಕಾದ ಸ್ಥಾನಗಳನ್ನು ಪಡೆದಿದ್ದು, ನೂತನ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಅವರು 7ನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದರು. ಇನ್ನು ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಬಿಹಾರ ಸಚಿವ ಸಂಪುಟ ಹೊಂದಲಿದ್ದು, ತಾರ್ ಕಿಶೋರ್ ಪ್ರಸಾದ್ ಮತ್ತು ರೇಣು ದೇವಿ ಅವರು ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಬಿಹಾರದ ನೂತನ ಉಪ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ರೇಣು ದೇವಿಯವರು ಬೆಟ್ಟಿಯಾ ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕಿಯಾಗಿ ಆಯ್ಕೆಯಾಗಿದ್ದಾರೆ. * 2010ರಲ್ಲಿ ನಿತೀಶ್ ಕುಮಾರ್ ಸರ್ಕಾರದಲ್ಲಿ ಸಚಿವೆಯಾಗಿ ಕಾರ್ಯ ನಿರ್ವಹಿಸಿದ್ದಾರೆ. ಮತ್ತು ಅನುಭವ ಹೊಂದಿದ್ದಾರೆ.