Job Description: ನವದೆಹಲಿ: ಭಾರತೀಯ ಚುನಾವಣಾ ಆಯೋಗವು ಬಾಲಿವುಡ್ ಸೇರಿ ಭಾರತದ ಬಹುತೇಕ ಭಾಷೆಗಳಲ್ಲಿ ನಟಿಸಿರುವ ನಟ ಸೋನು ಸೂದ್ ಅವರನ್ನು ಪಂಜಾಬ್ ರಾಜ್ಯ ಚುನಾವಣಾ ರಾಯಭಾರಿಯನ್ನಾಗಿ ನೇಮಿಸಿ ಆದೇಶ ಹೊರಡಿಸಿದೆ. ಅಲ್ಲದೆ ಪಂಜಾಬ್ ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿಯಾದ ಎಸ್. ಕರುಣಾ ರಾಜುರವರು ಚುನಾವಣಾ ಆಯೋಗದ ಪ್ರಸ್ತಾವನೆಗೆ ಅನುಮೋದನೆ ನೀಡಿದ್ದಾರೆ. ಕೋರೋಣ ಸೋಂಕಿನಿಂದಾಗಿ ಭಾರತದಾದ್ಯಂತ ವಿಧಿಸಿದ್ದ ಲಾಕ್ಡೌನ್ ಸಮಯದಲ್ಲಿ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಲು ಸಹಾಯ, ಸೇರಿ ಹಲವು ಸಮಾಜ ಸೇವೆಗಳನ್ನು ಮಾಡಿ ಎಲ್ಲರ ಗಮನಸೆಳೆದಿದ್ದರು.