Job Description: ಬೆಂಗಳೂರು: ಕರ್ನಾಟಕ ಬಯಲಾಟ ಅಕಾಡೆಮಿ ಅಧ್ಯಕ್ಷರಾಗಿದ್ದ ಡಾ. ಟಿ.ಬಿ. ಸೊಲಬಕ್ಕನವರ್ ಅವರು ತಮ್ಮ 73 ನೇ ವಯಸ್ಸಿನಲ್ಲಿ ನಿಧನರಾದರು. ಶಿಕ್ಷಕರಾಗಿ ವೃತ್ತಿ ಜೀವನ ಆರಂಭಿಸಿದ್ದ ಇವರು ಶಿಗ್ಗಾವಿಯ ಗೊಟಗೋಡಿಯಲ್ಲಿನ ಉತ್ಸವ ರಾಕ್ ಗಾರ್ಡನ್ ನಿರ್ಮಾಣದ ಮೂಲ ರೂವಾರಿಗಳಾಗಿದ್ದರು. ಸರ್ಕಾರಿ ಶಿಕ್ಷಕ ವೃತ್ತಿಯನ್ನು ತೊರೆದು ತಮ್ಮನ್ನು ಸಂಪೂರ್ಣವಾಗಿ ದೊಡ್ಡಾಟದಲ್ಲಿ ತೊಡಗಿಸಿಕೊಂಡಿದ್ದರು. ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಇವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಹಾಗೂ ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿ 2002ರಲ್ಲಿ ಅತ್ಯುತ್ತಮ ಕಲಾ ತರಬೇತಿ ಸಂಸ್ಥೆ ಎಂದು ಇವರ ದೊಡ್ಡಾಟ ಕಲಾ ತರಬೇತಿ ಸಂಸ್ಥೆಗೆ ಪ್ರಶಸ್ತಿ ನೀಡಿ ಗೌರವಿಸಿದೆ. 2001ರಲ್ಲಿ ಜಾನಪದ ಜ್ಞಾನ ವಿಜ್ಞಾನ ಪ್ರಶಸ್ತಿ, 2002ರಲ್ಲಿ ಸಂಘಟನಾ ಪ್ರಶಸ್ತಿ, 2005ರಲ್ಲಿ ರಾಜ್ಯೋತ್ಸವ ಹಾಗೂ 2006ರಲ್ಲಿ ಲಲಿತ ಕಲಾ ಅಕಾಡೆಮಿ ಪ್ರಶಸ್ತಿ ಸೇರಿ ಹಲವು ಗೌರವಗಳಿಗೆ ಪಾತ್ರರಾಗಿದ್ದಾರೆ.