Job Description: ಬೆಂಗಳೂರು : ರಾಜ್ಯದಲ್ಲಿ ಪ್ರಸ್ತುತ ಇರುವ ಜಿಲ್ಲೆಗಳ ಸಂಖ್ಯೆ 30 ಇದೀಗ ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ವಿಜಯನಗರ ಎಂಬ ನೂತನ ಜಿಲ್ಲೆ ಸ್ಥಾಪನೆಗೆ ನಡೆಯುತ್ತಿರುವ ದಶಕಗಳ ಹೋರಾಟ ಇದೀಗ ಮುನ್ನೆಲೆಗೆ ಬಂದಿದ್ದು, ರಾಜ್ಯದ 31ನೇ ನೂತನ ಜಿಲ್ಲೆಯಾಗಿ ವಿಜಯನಗರ ಶೀಘ್ರದಲ್ಲೇ ಅಧಿಕೃತವಾಗಿ ಅಸ್ತಿತ್ವಕ್ಕೆ ಬರಲಿದೆ. ಇತ್ತೀಚಿಗೆ ರಾಜ್ಯದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಬಳ್ಳಾರಿ ಜಿಲ್ಲೆಯನ್ನು ವಿಭಾಗಿಸಿ ನೂತನವಾಗಿ ವಿಜಯನಗರ ಜಿಲ್ಲೆ ಸ್ಥಾಪನೆಗೆ ಒಮ್ಮತ ಸೂಚಿರುವುದಾಗಿ ತಿಳಿದು ಬಂದಿದೆ.