Job Description: ಬೆಂಗಳೂರು : ಕರ್ನಾಟಕ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇತ್ತಿಚೀಗೆ ಆಯೋಜಿಸ ಲಾಗಿದ್ದ 'ಬೆಂಗಳೂರು ಟೆಕ್ ಸಮ್ಮಿಟ್' ಅನ್ನು ಪ್ರಧಾನಿ ನರೇಂದ್ರ ಮೋದಿಯವರು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು. ಬೆಂಗಳೂರು ತಂತ್ರಜ್ಞಾನ ಮೇಳದ 23ನೇ ಆವೃತ್ತಿ ಇದಾಗಿದ್ದು, ಕೋವಿಡ್ ಸೋಂಕು ಕಾರಣದಿಂದ ವರ್ಚುಯಲ್ ಆಗಿ ಮೇಳ ನಡೆಸಲಾಗುತ್ತಿದೆ. ಈ ಮೇಳದಲ್ಲಿ ಫಿನ್ಲೆಂಡ್, ಇಸ್ರೇಲ್, ನೆದರ್ ಲೆಂಡ್ಸ್, ಯುಕೆ, ಕೆನಡಾ, ಆಸ್ಟ್ರೇಲಿಯಾ, ಜರ್ಮನಿ, ಫ್ರಾನ್ಸ್, ಆಸ್ಟ್ರೇಲಿಯಾ, ಜರ್ಮನಿ, ಸ್ವೀಡನ್, ಸ್ವಿಟ್ವರ್ ಲೆಂಡ್, ಡೆನ್ಮಾರ್ಕ್, ತೈವಾನ್, ಜಪಾನ್, ಲಿಥುವಾನಿಯಾ ಸೇರಿ 25ಕ್ಕೂ ಅಧಿಕ ರಾಷ್ಟ್ರಗಳು ಪಾಲ್ಗೊಂಡಿದ್ದು ವಿಶೇಷ. ಈ ಮೇಳದಲ್ಲಿ ಒಟ್ಟು 100ಕ್ಕೂ ಹೆಚ್ಚು ನವೋದ್ಯಮಗಳು, 4000ಕ್ಕೂ ಹೆಚ್ಚು ಉದ್ಯಮ ಗಣ್ಯರು, ಸುಮಾರು 270 ವಿಷಯ ಪರಿಣತರು ಪಾಲ್ಗೊಳ್ಳಲಿದ್ದು ಹಾಗೂ 70ಕ್ಕೂ ಹೆಚ್ಚು ಗೋಷ್ಠಿಗಳು ನಡೆಯಲಿವೆ.