Job Description: ಹಾವೇರಿ: ಕರ್ನಾಟಕ ರಾಜ್ಯ ಸರ್ಕಾರವು ಸ್ವಾತಂತ್ರ್ಯ ಹೋರಾಟಗಾರ ‘ಮಹದೇವಪ್ಪ ಮೈಲಾರ’ ಅವರ ಹೆಸರನ್ನು ಜಿಲ್ಲಾ ಕೇಂದ್ರವಾದ ಹಾವೇರಿಯ ರೈಲು ನಿಲ್ದಾಣಕ್ಕೆ ನಾಮಕರಣ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ ಹಿನ್ನಲೆ ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ ಅನುಮೋದನೆ ನೀಡಿದೆ. ಈ ಕುರಿತು ಗೆಜೆಟ್ ನೋಟಿಫಿಕೇಶನ್ ಹೊರಡಿಸಿರುವ ಇಲಾಖೆಯು ಹಿಂದಿ, ಇಂಗ್ಲಿಷ್ ಹಾಗೂ ಕನ್ನಡದಲ್ಲಿ ನಾಮಫಲಕ ಅಳವಡಿಸುವಂತೆ ಗೃಹ ಸಚಿವಾಲಯವು ರಾಜ್ಯ ಸರ್ಕಾರಕ್ಕೆ ಈಗಾಗಲೇ ಸೂಚನೆ ನೀಡಿದೆ. ಗಾಂಧೀಜಿಯವರ ಅನುಯಾಯಿಯಾಗಿರುವ ಮಹದೇವಪ್ಪ ಮೈಲಾರ 1911ರಲ್ಲಿ ಹಾವೇರಿ ಜಿಲ್ಲೆಯ ಮೋಟೆಬೆನ್ನೂರಿನಲ್ಲಿ ಜನಿಸಿದರು. ಇವರು ತಮ್ಮ 16ನೇ ವಯಸ್ಸಿನಲ್ಲಿಯೇ ಸ್ವಾತಂತ್ರ್ಯ ಹೋರಾಟಕ್ಕಿಳಿದರು. ಮಹಾತ್ಮ ಗಾಂಧಿ ಅವರ ನೇತೃತ್ವದಲ್ಲಿ 1930ರಲ್ಲಿ ನಡೆದ ಉಪ್ಪಿನ ಸತ್ಯಾಗ್ರಹದಲ್ಲಿ ಇವರು ಭಾಗವಹಿಸಿದ್ದರು.