Job Description: ಕರ್ನಾಟಕ ಸರಕಾರದಿಂದ ಹಲವು ವಿವಿಧ ಯೋಜನೆಗಳ ಸೌಲಭ್ಯ ಕಲ್ಪಿಸುವ ಸಲುವಾಗಿ ಗ್ರಾಮೀಣ ಭಾಗದಲ್ಲಿ ಹೊಸದಾಗಿ ' ಗ್ರಾಮ ಒನ್' ಕೇಂದ್ರದ ಪ್ರಾಯೋಗಿಕ ಅನುಷ್ಠಾನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ದಿನಾಂಕ 19-11-2020 ರಂದು ಚಾಲನೆ ನೀಡಿದರು. ಮೊದಲಿಗೆ ಈ ಯೋಜನೆಯನ್ನು ದಾವಣಗೆರೆ ಜಿಲ್ಲೆಯ 100 ಗ್ರಾಮಗಳಲ್ಲಿ ಶುರುಮಾಡಲಾಗಿದೆ. ಈ ಯೋಜನೆಯಡಿಯಲ್ಲಿ ಕೇಂದ್ರಗಳು ಬೆಳಿಗ್ಗೆ 8 ರಿಂದ ರಾತ್ರಿ 8 ವರೆಗೆ ಕಾರ್ಯನಿರ್ವಹಿಸುತ್ತದೆ. ಸರ್ಕಾರದ ಯೋಜನೆಗಳಾದ ಆದಾಯ ಮತ್ತು ಜಾತಿ ಪ್ರಮಾಣ ಪತ್ರ, ವೃದ್ಧಾಪ್ಯ ವೇತನ & ವಿಧವಾ ವೇತನ, ಅಂಗವಿಕಲ ವೇತನ, ಸಂಧ್ಯಾ ಸುರಕ್ಷಾ ಯೋಜನೆ, ಹಿರಿಯ ನಾಗರಿಕರ ಗುರುತಿನ ಚೀಟಿ, ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಡ್ ಸೇರಿದಂತೆ ವಿವಿಧ 750ಕ್ಕೂ ಹೆಚ್ಚು ನಾಗರಿಕ ಸೇವೆಗಳ ಸೌಲಭ್ಯ ದೊರೆಯಲಿದೆ.