Job Description: ಬೆಂಗಳೂರು: ವಿಶ್ವ ಮೀನುಗಾರಿಕಾ ದಿನಾಚರಣೆ ಅಂಗವಾಗಿ ರಾಜ್ಯದಲ್ಲಿಂದು ಮತ್ಸ್ಯ ಸಂಪದ ಯೋಜನೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಚಾಲನೆ ನೀಡಿದರು ಏನಿದು ಯೋಜನೆ ? ಭಾರತ ಸರ್ಕಾರವು ಆರಂಭಿಸಿದ ಪ್ರಧಾನ್ ಮಂತ್ರಿ ಮತ್ಸ್ಯ ಸಂಪದ ಯೋಜನೆ ಮೀನುಗಾರಿಕೆ ಕ್ಷೇತ್ರದಲ್ಲಿ ಮೂಲಸೌಕರ್ಯದ ಕೊರತೆಯನ್ನು ನೀಗಿಸಲು ಆರಂಭಿಸಿದ ಒಂದು ಕಾರ್ಯಕ್ರಮವಾಗಿದೆ. ಈ ಯೋಜನೆಯನ್ನು 2019–20ರ ಕೇಂದ್ರ ಬಜೆಟನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಘೋಷಿಸಿದ್ದರು. ನೀಲಿ ಕ್ರಾಂತಿ ಅನುಷ್ಠಾನಗೊಳಿಸುವ ಮೂಲಕ ಮೀನುಗಳ ಉತ್ಪಾದನೆ ಮತ್ತು ಸಂಸ್ಕರಣೆಯಲ್ಲಿ ಭಾರತವನ್ನು ಮೊದಲ ಸ್ಥಾನದಲ್ಲಿಡಲು ಈ ಯೋಜನೆ ಸಹಾಯ ಮಾಡಲಿದ್ದು, ಯೋಜನೆಯು 2022–23ರ ವೇಳೆಗೆ ರೈತರ ಆದಾಯವನ್ನು ದ್ವಿಗುಣಗೊಳಿಸುವ ಮುಖ್ಯ ಗುರಿಯನ್ನು ಹೊಂದಿದೆ.