Job Description: ಲಕ್ನೋ : ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರವು ಲವ್ ಜಿಹಾದ್ ಕಾನೂನನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿರುವುದಾಗಿ ವರದಿಯಾಗಿದೆ. ಇತ್ತೀಚಿಗೆ ಉತ್ತರಪ್ರದೇಶದ ಮುಸ್ಲಿಂ ಯುವಕ ಹಾಗೂ ಹಿಂದೂ ಯುವತಿಯ ಮದುವೆ ವಿಷಯಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ವೈಯಕ್ತಿಕ ಆಯ್ಕೆಯ ಸ್ವಾತಂತ್ರ್ಯದ ವಿಚಾರದಲ್ಲಿ ಯಾರು ಮಧ್ಯಪ್ರವೇಶಿಸುವಂತಿಲ್ಲ ಎಂದು ನೀಡಿರುವ ತೀರ್ಪು ನೀಡಿದ್ದು. ಇದೆ ವೇಳೆ ಲವ್ ಜಿಹಾದ್ ತಡೆಗಟ್ಟುವ ನಿಟ್ಟಿನಲ್ಲಿ ಶೀಘ್ರದಲ್ಲಿಯೇ ಕಾನೂನು ಜಾರಿಗೊಳಿಸುವುದಾಗಿ ತಿಳಿಸಿದ ಉತ್ತರಪ್ರದೇಶ ಸರ್ಕಾರ, ಲವ್ ಜಿಹಾದ್ ನಿಷೇಧ ಕಾನೂನು ಪ್ರಸ್ತಾಪದ ಅಂಗೀಕಾರಕ್ಕಾಗಿ ಕೇಂದ್ರ ಕಾನೂನು ಸಚಿವಾಲಯಕ್ಕೆ ಕಳುಹಿಸಿತ್ತು. ಈ ನಡುವೆಯೇ ಉತ್ತರಪ್ರದೇಶದ ಸರ್ಕಾರ ಸುಗ್ರೀವಾಜ್ಞೆ ಮೂಲಕ ಲವ್ ಜಿಹಾದ್ ಕಾಯ್ದೆಯನ್ನು ಜಾರಿಗೊಳಿಸಿರುವುದಾಗಿ ತಿಳಿದುಬಂದಿದೆ.