Job Description: ಪ್ರತೀ ವರ್ಷ ನವೆಂಬರ್ 26 ದಿನದಂದು ಭಾರತದಲ್ಲಿ ಸಂವಿಧಾನ ದಿನ ಎಂದು ಆಚರಿಸಲಾಗುತ್ತಿದ್ದು, ಈ ದಿನವನ್ನು ರಾಷ್ಟ್ರೀಯ ಕಾನೂನು ದಿನ ಅಥವಾ ನ್ಯಾಷನಲ್ ಲಾ ಡೇ ಎಂದೂ ಕರೆಯಲಾಗುತ್ತದೆ. ಭಾರತವು ಸ್ವಾತಂತ್ರ್ಯಾನಂತರ ಆಡಳಿತ ಅನುಕೂಲಕ್ಕಾಗಿ ಸಂವಿಧಾನವನ್ನು ಅಳವಡಿಸಿಕೊಂಡ ದಿನದ ಸ್ಮರಣೆಗಾಗಿ ಪ್ರತಿ ವರ್ಷ ನವೆಂಬರ್ 26 ದಿನವನ್ನ ಸಂವಿಧಾನ ದಿನವನ್ನಾಗಿ ಆಚರಿಸಲಾಗುತ್ತದೆ. ಸಂವಿಧಾನವು 1950 ರ ಜನವರಿ 26ರಂದು ವಾಸ್ತವದಲ್ಲಿ ಜಾರಿಗೆ ಬಂದಿತು. 2015 ಕ್ಕೂ ಮೊದಲು ಈ ದಿನವನ್ನು ಕಾನೂನು ದಿನವನ್ನಾಗಿ ಆಚರಿಸಲಾಗುತ್ತಿತ್ತು. ನಂತರ ಸಂವಿಧಾನ ದಿನ ಎಂದು ಆಚರಣೆ ಶುರುವಾಗಿದೆ.