Job Description: ಬೆಂಗಳೂರು : ವಿಜಯನಗರ ನೂತನ ಜಿಲ್ಲೆಗೆ ರಾಜ್ಯ ಸಚಿವ ಸಂಪುಟವು ಅನುಮೋದನೆ ನೀಡಿದ್ದು, ಹೊಸಪೇಟೆಯನ್ನು ಜಿಲ್ಲಾಕೇಂದ್ರ ಹಾಗು ಒಟ್ಟು ಆರು ತಾಲೂಕುಗಳನ್ನು ಸೇರ್ಪಡೆ ಮಾಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಪ್ರಸ್ತುತ ಬಳ್ಳಾರಿ ಜಿಲ್ಲೆಯಲ್ಲಿದ್ದ ಹೊಸಪೇಟೆ, ಹರಪನಹಳ್ಳಿ, ಹೂವಿನ ಹಡಗಲಿ, ಹಗರಿ ಬೊಮ್ಮನಹಳ್ಳಿ, ಕೊಟ್ಟೂರು, ಕೂಡ್ಲಿಗಿ ತಾಲೂಕುಗಳನ್ನು ನೂತನ ಜಿಲ್ಲೆ ವಿಜಯನಗರಕ್ಕೆ ಸೇರ್ಪಡೆ ಮಾಡಲಾಗುವದು. ಸದ್ಯ ವಿಜಯನಗರ ಕರ್ನಾಟಕದ 31ನೇ ಜಿಲ್ಲೆಯಾಗಿ ರಚನೆಯಾಗಿದೆ.