Job Description: ಕರ್ನಾಟಕ ರಾಜ್ಯದ 30 ಜಿಲ್ಲೆಗಳ 5762 ಗ್ರಾಮ ಪಂಚಾಯ್ತಿಗಳಿಗೆ ಎರಡು ಹಂತದಲ್ಲಿ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ಘೋಷಣೆ ಮಾಡಿದೆ. ಹಾಗೂ ಅದರ ಜೊತೆಗೆ ಕೊರೋನಾ ಸೋಂಕಿನ ಭೀತಿಯ ಹಿನ್ನಲೆಯಲ್ಲಿ ಒಂದು ಸಾವಿರ ಮತದಾರರಿಗೆ ಒಂದು ಮತಗಟ್ಟೆ ಸ್ಥಾಪಿಸಲಾಗಿದೆ. # ಡಿಸೆಂಬರ್ 22ರಂದು ಮೊದಲನೇ ಹಂತದಲ್ಲಿ 113 ತಾಲ್ಲೂಕುಗಳ 2,930 ಗ್ರಾಮ ಪಂಚಾಯ್ತಿಗಳಿಗೆ ಚುನಾವಣೆ ನಡೆಯಲಿದೆ. # ಡಿಸೆಂಬರ್ 27, 2020ರಂದು ಎರಡನೇ ಹಂತದಲ್ಲಿ 113 ತಾಲ್ಲೂಕುಗಳ 2,832 ಗ್ರಾಮ ಪಂಚಾಯ್ತಿಗಳಿಗೆ ಚುನಾವಣೆ ನಡೆಯಲಿದೆ. # ರಾಜ್ಯದ 5762 ಗ್ರಾಮ ಪಂಚಾಯ್ತಿಗಳಿಗೆ 92,121 ಸದಸ್ಯರ ಆಯ್ಕೆಗಾಗಿ ಎರಡು ಹಂತದಲ್ಲಿ ಈ ಬಾರಿ ಚುನಾವಣೆ ನಡೆಯಲಿದೆ. # ಇದೇ ಮೊದಲ ಬಾರಿಗೆ ಬೀದರ್ ಜಿಲ್ಲೆಯಲ್ಲಿ ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಬಳಸಿಕೊಂಡು ಚುನಾವಣೆ ನಡೆಸಲಿದೆ ಎಂದು ರಾಜ್ಯ ಚುನಾವಣಾ ಆಯುಕ್ತ ಬಸವರಾಜ್ ಮಾಹಿತಿ ನೀಡಿದ್ದಾರೆ.