Job Description: ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚಿಗೆ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರಿಗೆ ದೂರವಾಣಿ ಕರೆ ಮೂಲಕ ಜನವರಿ 26ರ 2021ರಂದು ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸುವಂತೆ ಆಹ್ವಾನ ನೀಡಿದರು. # ಇದೆ ವೇಳೆ ಬ್ರಿಟನ್ನಲ್ಲಿ ಮುಂದಿನ ವರ್ಷ ನಡೆಯಲಿರುವ ಜಿ-7 ಶೃಂಗಸಭೆಗೆ ಮೋದಿಯನ್ನು ಬೋರಿಸ್ ಜಾನ್ಸನ್ ಆಹ್ವಾನ ನೀಡಿದರು. # ಈ ಮೊದಲು ಬ್ರಿಟನ್ ಪ್ರಧಾನಿ ಜಾನ್ ಮೇಜರ್ ಅವರು 1993ರಲ್ಲಿ ನಡೆದ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಪಾಲ್ಗೊಂಡಿದ್ದರು. ಬ್ರಿಟನ್ ಈಗಷ್ಟೇ ಐರೋಪಿಯನ್ ಒಕ್ಕೂಟದಿಂದ ಹೊರಬಂದಿದ್ದು, ಜಗತ್ತಿನ ಎಲ್ಲ ದೇಶಗಳ ಜತೆಗೆ ಹೊಸದಾಗಿ ಒಪ್ಪಂದಗಳನ್ನು ಮಾಡಿಕೊಳ್ಳಲು ಎದುರು ನೋಡುತ್ತಿದೆ.