Job Description: ಕರ್ನಾಟಕ ರಾಜ್ಯದ ಮೊದಲ ತ್ಯಾಜ್ಯ ವಿದ್ಯುತ್ ಉತ್ಪಾದನಾ ಘಟಕವನ್ನು ರಾಮನಗರ ಜಿಲ್ಲೆಯ ಬಿಡದಿಯಲ್ಲಿ ಸ್ಥಾಪಿಸಲು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ವರ್ಚುವಲ್ ಕಾರ್ಯಕ್ರಮದ ಮೂಲಕ ಶಿಲಾನ್ಯಾಸ ನೆರವೇರಿಸಿದರು. ವೈಜ್ಞಾನಿಕ ತ್ಯಾಜ್ಯ ವಿಲೇವಾರಿ ಮಾಡುವ ನಿಟ್ಟಿನಲ್ಲಿ ತ್ಯಾಜ್ಯ ವಿದ್ಯುತ್ ಉತ್ಪಾದನಾ ಘಟಕ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗಿದೆ. ಈ ಘಟಕ ಸ್ಥಾಪನೆಗಾಗಿ 260 ಕೋಟಿ ರೂ. ವೆಚ್ಚವಾಗಲಿದ್ದು, ಕರ್ನಾಟಕ ವಿದ್ಯುತ್ ನಿಗಮ ಹಾಗೂ ಬಿಬಿಎಂಪಿಯವರು ತಲಾ 130 ಕೋಟಿ ರೂ. ವೆಚ್ಚ ಭರಿಸಲಿದ್ದಾರೆ. ಮುಂದಿನ ಎರಡು ವರ್ಷಗಳಲ್ಲಿ ಈ ಘಟಕದ ನಿರ್ಮಾಣ ಪೂರ್ಣಗೊಳ್ಳಲಿದೆ. # ಬೆಂಗಳೂರಿನಲ್ಲಿ ಪ್ರತಿದಿನ 5000 ಮೆಟ್ರಿಕ್ ಟನ್ ತ್ಯಾಜ್ಯ ಉತ್ಪಾದನೆಯಾಗುತ್ತಿದೆ. # ಈ ಘಟಕದಲ್ಲಿ ದಿನಕ್ಕೆ 600 ಟನ್ ಸಂಸ್ಕರಿತ ತ್ಯಾಜ್ಯ ಬಳಸಿ, 11.5 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡುವ ಗುರಿ ಹೊಂದಲಾಗಿದೆ.