Job Description: # ಪಂಜಾಬ್ನ ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ರೈತರ ಪ್ರತಿಭಟನೆಯನ್ನು ಬೆಂಬಲಿಸಿ ತಮ್ಮ ಪದ್ಮವಿಭೂಣ ಪ್ರಶಸ್ತಿಯನ್ನು ಕೇಂದ್ರ ಸರ್ಕಾರಕ್ಕೆ ಮರಳಿಸಿದ್ದಾರೆ. # ಇದಲ್ಲದೆ ಇನ್ನು ಸುಮಾರು 30ಕ್ಕೂ ಹೆಚ್ಚು ಕ್ರೀಡಾಪಟುಗಳು ಪಂಜಾಬ್ನ ರೈತರ ಹೋರಾಟಕ್ಕಾಗಿ ಕೇಂದ್ರ ಸರ್ಕಾರದ ಪ್ರತಿಷ್ಠಿತ ಪ್ರಶಸ್ತಿಗಳನ್ನು ಹಿಂತಿರುಗಿಸುವ ಮೂಲಕ ರೈತರಿಗೆ ಬೆಂಬಲ ಸೂಚಿಸಿದ್ದಾರೆ. # ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಮಸೂದೆಯನ್ನು ಬಿಜೆಪಿ ಮೈತ್ರಿ ಪಕ್ಷ ಅಕಾಲಿದಳ ತೀವ್ರವಾಗಿ ವಿರೋಧಿಸಿತ್ತು. # ಕೇಂದ್ರದ ಈ ಮಸೂದೆಗೆ ಪಂಜಾಬ್, ಹರಿಯಾಣ ಸೇರಿದಂತೆ ದೇಶದ ನಾನಾ ಭಾಗದ ರೈತರು ತೀವ್ರವಾಗಿ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.