Job Description: # ಭಾರತ ತಂಡದ ವಿಕೆಟ್ಕೀಪರ್-ಬ್ಯಾಟ್ಸ್ಮನ್ ಪಾರ್ಥಿವ್ ಪಟೇಲ್ ಎಲ್ಲ ಮಾದರಿಗಳ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. # ಗುಜರಾತ್ನ 35 ವರ್ಷದ ಎಡಗೈ ಬ್ಯಾಟ್ಸ್ಮನ್ ಪಾರ್ಥಿವ್ ಪಟೇಲ್ ಅವರು "18 ವರ್ಷಗಳ ಕ್ರಿಕೆಟ್ ಜೀವನಕ್ಕೆ ವಿದಾಯ ಹೇಳುತ್ತಿದ್ದೇನೆ" ಎಂದು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡುವ ಮೂಲಕ ಘೋಷಿಸಿಕೊಂಡಿದ್ದಾರೆ. # ಟೆಸ್ಟ್ ಗೆ ಪಾದಾರ್ಪಣೆ ಮಾಡಿದ ಕಿರಿಯ ಆಟಗಾರನೆಂಬ ಹೆಗ್ಗಳಿಕೆ ಅವರದು, ಪಾರ್ಥಿವ್ ತಮ್ಮ 17ನೇ ವಯಸ್ಸಿನಲ್ಲಿ ಟೆಸ್ಟ್ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ್ದರು. ಆಗ ಸೌರವ್ ಗಂಗೂಲಿ ತಂಡದ ನಾಯಕರಾಗಿದ್ದರು. # ಪಾರ್ಥಿವ್ 25 ಟೆಸ್ಟ್, 38 ಏಕದಿನ ಹಾಗೂ ಎರಡು ಟ್ವೆಂಟಿ-20 ಪಂದ್ಯಗಳಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದಾರೆ. # 2016-17ನೇ ಸಾಲಿನಲ್ಲಿ ಗುಜರಾತ್ಗೆ ಚೊಚ್ಚಲ ರಣಜಿ ಟ್ರೋಫಿ ಜಯದ ಕಾಣಿಕೆ ನೀಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು # ಐಪಿಎಲ್ನಲ್ಲಿ ಮುಂಬೈ ಇಂಡಿಯನ್ಸ್, ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಆರ್ಸಿಬಿ ತಂಡಗಳಲ್ಲಿ ಆಡಿದ್ದರು.