Job Description: ದೆಹಲಿಯ ರಾಜಪಥದಲ್ಲಿ 971 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ನೂತನ ಸಂಸತ್ ಭವನದ ಕಟ್ಟಡಕ್ಕೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಶಿಲಾನ್ಯಾಸ ನೆರವೇರಿಸಿದರು. * ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಈ ಸಂಸತ್ ಭವನದಲ್ಲಿ ಏಕಕಾಲಕ್ಕೆ 1,224 ಸಂಸದರು ಕುಳಿತುಕೊಳ್ಳಲು ಅವಕಾಶ ಮಾಡಲಾಗುವದು. * ಒಟ್ಟು 64,500 ಚ.ಮೀ. ವಿಸ್ತೀರ್ಣದಲ್ಲಿ ನೂತನ ಸಂಸತ್ ಭವನದ ಕಟ್ಟಡ ನಿರ್ಮಾಣ ಕಾರ್ಯ ನಡೆಯಲಿದೆ. * ವಿಶೇಷವಾಗಿ ಈ ಕಟ್ಟಡ ಭೂಕಂಪವನ್ನು ತಡೆಯುವ ಸಾಮರ್ಥ್ಯವನ್ನು ಹೊಂದಿರಲಿದೆ. * ಪ್ರಸ್ತುತ ಈಗಿರುವ ಸಂಸತ್ ಭವನಕ್ಕೆ 1921ರಲ್ಲಿ ಶಂಕು ಸ್ಥಾಪನೆ ನೆರವೇರಿಸಲಾಗಿತ್ತು. ಆ ವೇಳೆ 83 ಲಕ್ಷ ರೂ. ವೆಚ್ಚದಲ್ಲಿ ಈ ಕಟ್ಟಡವನ್ನು ನಿರ್ಮಿಸಲಾಗಿತ್ತು. ಕಳೆದ ಸೆಪ್ಟೆಂಬರ್ನ ಹರಾಜು ಪ್ರಕ್ರಿಯೆಯಲ್ಲಿ 971 ಕೋಟಿ ರೂ. ವೆಚ್ಚದ ನೂತನ ಸಂಸತ್ ಭವನದ ನಿರ್ಮಾಣದ ಜವಾಬ್ದಾರಿಯನ್ನು ಟಾಟಾ ಪ್ರಾಜೆಕ್ಟ್ ಲಿಮಿಟೆಡ್ ಪಡೆದುಕೊಂಡಿದೆ.