Job Description: ಬೆಂಗಳೂರು ಅಟಲ್ ಬಿಹಾರಿ ವಾಜಪೇಯಿ ಅಂತಾರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣಕ್ಕೆ ಎಚ್.ಎಸ್.ಆರ್. ಬಡಾವಣೆಯಲ್ಲಿ ಇತ್ತೀಚಿಗೆ ಚಾಲನೆ ನೀಡಲಾಯಿತು. ಒಟ್ಟು 4.25 ಕೋಟಿ ರೂ ವೆಚ್ಚದಲ್ಲಿ 7.24 ಎಕರೆ ಪ್ರದೇಶದಲ್ಲಿ ಕ್ರೀಡಾಂಗಣವನ್ನು ಕರ್ನಾಟಕ ಸರ್ಕಾರ ಹಾಗೂ ಬಿಬಿಎಂಪಿ ಸಹಯೋಗದಲ್ಲಿ ನಿರ್ಮಾಣಗೊಳ್ಳಲಿದ್ದು, ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದ ನೀಲನಕ್ಷೆಯನ್ನು ವೀಕ್ಷಣೆಮಾಡಿ ಕಾಮಗಾರಿಗೆ ಸಂಸದ ತೇಜಸ್ವಿ ಸೂರ್ಯ ಮತ್ತು ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಶನಿವಾರ ಚಾಲನೆ ನೀಡಿದರು.