Job Description: ಬೆಂಗಳೂರಿನ ಹಿರಿಯ ವಿಜ್ಞಾನಿ ಪದ್ಮ ವಿಭೂಷಣ ಪ್ರಶಸ್ತಿ ಪುರಸ್ಕೃತ, ಪ್ರೊಫೆಸರ್ ರೊದ್ದಂ ನರಸಿಂಹ ರವರು ತಮ್ಮ 87ನೇ ವಯಸ್ಸಿನಲ್ಲಿ ವಿಧಿವಶರಾಗಿದ್ದಾರೆ. ರೊದ್ದಂ ನರಸಿಂಹ ರವರು 1933ರ ಜು. 20ರಂದು ಜನಿಸಿದರು, ನಂತರ ಅವರು ಮೈಸೂರು ವಿಶ್ವವಿದ್ಯಾಲಯದಿಂದ ಬಿ.ಇ ಪದವಿ ಪಡೆದ ನಂತರ ಭಾರತೀಯ ವಿಜ್ಞಾನ ಸಂಸ್ಥೆ ಹಾಗೂ ಕ್ಯಾಲಿಫೊರ್ನಿಯಾ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಉನ್ನತ ವ್ಯಾಸಂಗ ಮತ್ತು ಸಂಶೋಧನೆ ಮಾಡಿದರು. ಮತ್ತು ಇವರು ಯುವ ವಿಜ್ಞಾನಿಗಳಿಗೆ ಮಾರ್ಗದರ್ಶಕರಾಗಿದ್ದರು.