Job Description: ಎಲೆಕ್ಟೊರಲ್ ಕಾಲೇಜ್ ಅಧಿಕೃತವಾಗಿ ಅಮೆರಿಕಾದ ಚುನಾವಣಾ ಫಲಿತಾಂಶ ಘೋಷಣೆ ಮಾಡಿದೆ. ಡೆಮಾಕ್ರಟಿಕ್ ಪಕ್ಷದ ಜೋ ಬೈಡನ್ ಅವರು 306 ಎಲೆಕ್ಟೊರಲ್ ಮತಗಳನ್ನು ಪಡೆದು ಜಯ ಗಳಿಸಿದ್ದಾರೆ. ಒಂದು ತಿಂಗಳು ಕಳೆದ ಬಳಿಕ ಅಮೆರಿಕ ಅಧ್ಯಕ್ಷೀಯ ಚುನಾವಣೆ ಫಲಿತಾಂಶ ಅಧಿಕೃತವಾಗಿ ಹೊರಬಂದಿದೆ. ಡೆಮಾಕ್ರಟಿಕ್ ಪಕ್ಷದ ಜೋ ಬೈಡನ್ ಅವರು ಜಯಗಳಿಸಿರುವುದಾಗಿ ಮಾಧ್ಯಮಗಳು ತಿಳಿಸಿದವು, ಇವರು ಮುಂದಿನ ಅಧ್ಯಕ್ಷರಾಗಲಿದ್ದಾರೆ ಎಂದು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ.