Job Description: ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಮತ್ತು ಆಯುಷ್ ಸಚಿವ ಶ್ರೀಪಾದ ಯೆಸ್ಸೊ ನಾಯಕ್ ರವರು ಕಾರ್ಯಕ್ರಮವೊಂದರಲ್ಲಿ ಯೋಗಾಸನ ಸ್ಪರ್ಧಾತ್ಮಕ ಕ್ರೀಡೆ ಎಂದು ಅಧಿಕೃತ ಘೋಷಣೆಮಾಡಿದ್ದಾರೆ. ಯೋಗಾಸನ ಒಂದು ಸ್ಪರ್ಧಾತ್ಮಕ ಕ್ರೀಡೆ ಯೋಗವನ್ನು ಉತ್ತೇಜಿಸಲು ಅದರ ಉಪಯೋಗದ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಮಾನಸಿಕ ಸಾಮರ್ಥ್ಯವನ್ನು ಹೆಚ್ಚಿಸಲು ಯೋಗಾಸನವು ಅನುಕೂಲಕರವಾಗಿದೆ ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು. ಇದೆ ವೇಳೆ ಮುಂದಿನ ಖೇಲೋ ಇಂಡಿಯಾ ಕ್ರೀಡಾಕೂಟದಲ್ಲಿ ಯೋಗಾಸನವನ್ನು ಸೇರಿಸಲಾಗುವುದು ಎಂದು ಕ್ರೀಡಾ ಸಚಿವರು ತಿಳಿಸಿದ್ದಾರೆ, ಯೋಗಾಸನವನ್ನು ಸ್ಪರ್ಧಾತ್ಮಕ ಕ್ರೀಡೆಯನ್ನಾಗಿ ಮಾಡುವದರಿಂದ ಜನರ ದೈಹಿಕ ಮತ್ತು ಮಾನಸಿಕ ಸಾಮರ್ಥ್ಯವನ್ನು ಸುಧಾರಿಸಲು ಅನುಕೂಲಕರವಾಗಲಿದೆ. ಯೋಗಾಸನ ಕ್ರೀಡಾ ಒಕ್ಕೂಟವನ್ನು ಕಳೆದ ತಿಂಗಳು ನವೆಂಬರ್ ನಲ್ಲಿ ಯೋಗ ಗುರು ಬಾಬಾ ರಾಮದೇವ್ ಅವರ ಅಧ್ಯಕ್ಷತೆಯಲ್ಲಿ ಸ್ಥಾಪನೆಮಾಡಲಾಗಿದ್ದು, ಸ್ಪರ್ಧಾತ್ಮಕ ಕ್ರೀಡೆಯಾಗಿ ಯೋಗದ ಸಂರಕ್ಷಣೆ ಮತ್ತು ಅಭಿವೃದ್ಧಿಗಾಗಿ ರಾಷ್ಟ್ರೀಯ ಯೋಗಾಸನ ಸ್ಪೋರ್ಟ್ ಫೆಡರೇಶನ್ ಆಫ್ ಇಂಡಿಯಾ ಅನ್ನು ಸ್ಥಾಪಿಸಲಾಗಿದೆ.