Job Description: ಬಾಂಗ್ಲಾದೇಶದ 49ನೇ ವಾರ್ಷಿಕೋತ್ಸವದಂದು ಭಾರತ ಹಾಗೂ ಬಾಂಗ್ಲಾದೇಶ ವರ್ಚುವಲ್ ಶೃಂಗಸಭೆಯು ನಡೆದಿದೆ ಈ ಸಭೆಯಲ್ಲಿ ಭಾರತದ ಪ್ರಧಾನಿ ಮೋದಿ ಹಾಗೂ ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾರವರು ಭಾಗಿಯಾಗಿದ್ದರು. 1965ರಲ್ಲಿ ಸ್ಥಗಿತಗೊಂಡಿದ್ದ ಚಿಲಿಹತಿ-ಹಲ್ದಿಬಾರಿ ರೈಲು ಸಂಪರ್ಕ ಪುನಾರಂಭ ಸೇರಿದಂತೆ ಒಟ್ಟು 7 ವಿವಿಧ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಶೃಂಗಸಭೆಯನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದ್ದು, ನೆರೆಹೊರೆಯ ಮಿತ್ರರಾಷ್ಟ್ರಗಳಲ್ಲಿ ಭಾರತ-ಬಾಂಗ್ಲಾದೇಶಕ್ಕೆ ಪ್ರಮುಖ ಸ್ಥಾನ ನೀಡಲಾಗಿದೆ ಎಂದು ತಿಳಿಸಿದರು. ಚಿಲಹತಿ-ಹಲ್ಡಿಬಾರಿ ರೈಲು ಸಂಪರ್ಕದಿಂದಾಗಿ ಬಾಂಗ್ಲಾದೇಶದಿಂದ ಅಸ್ಸಾಂ ಮತ್ತು ಪಶ್ಚಿಮ ಬಂಗಾಳಕ್ಕೆ ಸಂಪರ್ಕ ಹೆಚ್ಚಲಿದೆ.