Job Description: ಭಾರತದಲ್ಲಿ ಪ್ರತಿ ವರ್ಷ ಡಿಸೆಂಬರ್ 19 ರಂದು ಗೋವಾ ವಿಮೋಚನಾ ದಿನವನ್ನು ಆಚರಣೆ ಮಾಡಲಾಗುತ್ತದೆ. ಪೋರ್ಚುಗೀಸ್ ಆಳ್ವಿಕೆಯಿಂದ ಗೋವಾವನ್ನು ಮುಕ್ತಗೊಳಿಸಿರುವ ಭಾರತೀಯ ಸೈನ್ಯದ ವಿಜಯವನ್ನು ಗುರುತಿಸಲು ಸಲುವಾಗಿ ಈ ದಿನವನ್ನು ಆಚರಣೆ ಮಾಡಲಾಗುತ್ತದೆ. ಭಾರತೀಯ ಸೇನೆಯು ಡಿ.18, 1961ರಂದು ಆಪರೇಷನ್ ವಿಜಯ್ ಎಂಬ 36 ಗಂಟೆಗಳ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಈ ಕಾರ್ಯಾಚರಣೆಯಲ್ಲಿ ಭಾರತೀಯ ವಾಯುಪಡೆ ಮತ್ತು ನೌಕಾಪಡೆಯ ಸೇರಿಕೊಂಡು ಡಿ.19, 1961 ರಂದು ಗೋವಾ ಪ್ರದೇಶವನ್ನು ಪುನಃ ಪಡೆದುಕೊಳ್ಳುವದರಲ್ಲಿ ಯಶಸ್ವಿಯಾದವು.