Job Description: ಭಾರತ ಸರ್ಕಾರವು ದೇಶದಲ್ಲಿ ಹಸಿರು ರಾಷ್ಟ್ರೀಯ ಹೆದ್ದಾರಿ ಕಾರಿಡಾರ್ಗಳನ್ನು ಅಭಿವೃದ್ಧಿ ಮಾಡಲು ಇತ್ತೀಚೆಗೆ ವಿಶ್ವಬ್ಯಾಂಕ್ನೊಂದಿಗೆ 500 ಮಿಲಿಯನ್ ಅಮೆರಿಕನ್ ಡಾಲರು ಮೊತ್ತದ ಸಾಲ ಒಪ್ಪಂದವನ್ನು ಮಾಡಿಕೊಳ್ಳಲಾಗಿದೆ. ಈ ಹಸಿರು ರಾಷ್ಟ್ರೀಯ ಹೆದ್ದಾರಿ ಕಾರಿಡಾರ್ ಯೋಜನೆಯಡಿ 783 ಕಿಲೋ ಮೀಟರ್ ಹಸಿರು ಹೆದ್ದಾರಿಗಳನ್ನು ಹಿಮಾಚಲ ಪ್ರದೇಶ, ಆಂಧ್ರಪ್ರದೇಶ, ರಾಜಸ್ಥಾನ ಮತ್ತು ಉತ್ತರ ಪ್ರದೇಶದಲ್ಲಿ ಅಭಿವೃದ್ಧಿ ಪಡಿಸುವ ಈ ಯೋಜನೆಗೆ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಒಪ್ಪಿಗೆಯನ್ನು ನೀಡಿವೆ ಹಾಗೂ ಇದು ದೇಶದ ಅಭಿವೃದ್ಧಿಪಡಿಸಲಾಗುತ್ತದೆ. ಒಟ್ಟು 7,660 ಕೋಟಿ ರೂ. ವೆಚ್ಚದ ಯೋಜನೆ ಇದಾಗಿದ್ದು, ಸರ್ಕಾರವು ಈ ಯೋಜನೆಯ ವೆಚ್ಚದ 1% ಹೆದ್ದಾರಿ ತೋಟ ಮತ್ತು ಅದರ ನಿರ್ವಹಣೆಗೆ ಮೀಸಲಿಡಲಾಗುತ್ತದೆ ಎಂದು ತಿಳಿಸಲಾಗಿದೆ.