Job Description: * ಕರ್ನಾಟಕ ರಾಜ್ಯದಲ್ಲಿ ಇನ್ನು ಮುಂದೆ ವರ್ಷದ 365 ದಿನ ಹಾಗೂ ದಿನದ 24 ಗಂಟೆಯ ಕಾಲ ಅಂಗಡಿ, ವಾಣಿಜ್ಯ ಮಳಿಗೆಗಳು ತೆರೆಯಲು ರಾಜ್ಯ ಸರಕಾರ ಮಹತ್ವದ ಆದೇಶ ಹೊರಡಿಸಿದೆ. ಇದರಿಂದ ರಾಜ್ಯದಲ್ಲಿನ ನಿರುದ್ಯೋಗ ಸಮಸ್ಯೆ ಸುಧಾರಿಸಬಹುದು ಮತ್ತು ಅದರ ಜೊತೆಗೆ ವಾಣಿಜ್ಯ ಚಟುವಟಿಕೆಗಳನ್ನು ಹೆಚ್ಚಿಸುವ ಉದ್ದೇಶ ಹೊಂದಲಾಗಿದೆ. * ಕಾರ್ಮಿಕ ಇಲಾಖೆ ಅಧಿಸೂಚನೆ ಪ್ರಕಾರ 10ಕ್ಕಿಂತ ಹೆಚ್ಚು ಕೆಲಸಗಾರರನ್ನು ಹೊಂದಿರುವ ಅಂಗಡಿ ಮತ್ತು ವಾಣಿಜ್ಯ ಮಳಿಗೆಗಳು ದಿನದ 24 ಗಂಟೆಯೂ ತೆರೆಯಲು ಅವಕಾಶ ನೀಡಲಾಗಿದ್ದು, ಮತ್ತು ಈ ಅಧಿಸೂಚನೆಯು ಮುಂದಿನ 3 ವರ್ಷಗಳಿಗೆ ಅನ್ವಯವಾಗಲಿದೆ ಎಂದು ಕಾರ್ಮಿಕ ಇಲಾಖೆ ಮಾಹಿತಿ ನೀಡಿದೆ. * 1963ರ ಸಂಬಳ ಮತ್ತು ಭತ್ಯೆ ಕಾಯ್ದೆ ಅಡಿಯಲ್ಲಿ ಕಾರ್ಮಿಕರ ಸಂಬಳ ಮತ್ತು ಹೆಚ್ಚಿನ ಸಮಯದ ಭತ್ಯೆಯನ್ನು ನೀಡಬೇಕು ಎಂದು ಕಾರ್ಮಿಕ ಇಲಾಖೆ ಹೇಳಿದೆ.