Job Description: * GAIL ಇಂಡಿಯಾ ಲಿಮಿಟೆಡ್ ವತಿಯಿಂದ ನಿರ್ಮಿತವಾದ, ಕೇರಳದ ಕೊಚ್ಚಿಯಿಂದ ಕರ್ನಾಟಕದ ಮಂಗಳೂರಿಗೆ ನೈಸರ್ಗಿಕ ಅನಿಲ ಪೈಪ್ಲೈನ್ ನನ್ನು ಪ್ರಧಾನಿ ನರೇಂದ್ರ ಮೋದಿಯವರು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಣೆ ಮಾಡಿದರು. * 450 ಕಿ.ಮೀ ದೂರದ ನ್ಯಾಚುರಲ್ ಗ್ಯಾಸ್ ಪೈಪ್ ಲೈನ್ ನಿರ್ಮಾಣದ ಕಾರ್ಯವು 2009ರಲ್ಲಿ ಪ್ರಾರಂಭವಾಗಿತ್ತು. ಪ್ರಸ್ತುತ ಇದೀಗ ಸರಿ ಸುಮಾರು 3,000 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿದೆ. * ಕೊಚ್ಚಿಯಿಂದ - ಮಂಗಳೂರಿನವರೆಗೂ ಪ್ರತಿ ದಿನ 12 ಮಿಲಿಯನ್ ಮೆಟ್ರಿಕ್ ಸ್ಟ್ಯಾಂಡರ್ಡ್ ಕ್ಯೂಬಿಕ್ ಮೀಟರ್ ನೈಸರ್ಗಿಕ ಅನಿಲವನ್ನು ಈ ಗ್ಯಾಸ್ ಪೈಪ್ ಲೈನ್ ಮೂಲಕ ಸಾಗಿಸಲಾಗುತ್ತದೆ.