Job Description: * ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ-2020 ಅನ್ನು ವಿಧಾನಸಭೆಯಲ್ಲಿ ಮಂಡಿಸಲಾಗಿತ್ತು, ಆದರೆ ಬಹುಮತ ಇಲ್ಲದ ಕಾರಣ ವಿಧಾನ ಪರಿಷತ್ನಲ್ಲಿ ಮಂಡನೆಯಾಗಿರಲಿಲ್ಲ, ಪ್ರಸ್ತುತ ಇದೀಗ ಕರ್ನಾಟಕ ರಾಜ್ಯದ ರಾಜ್ಯಪಾಲ ವಜುಭಾಯಿ ವಾಲಾ ಅವರು ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಸುಗ್ರೀವಾಜ್ಞೆಗೆ ಸಹಿ ಹಾಕಿ ಜಾರಿಮಾಡಿದರು. * ಗೋಹತ್ಯೆ ನಿಷೇಧ ಕಾಯ್ದೆ ನಿಯಮ ಉಲ್ಲಂಘಿಸಿದರೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಲಾಗುತ್ತದೆ, ಆದರೆ ಕೃಷಿ ಮತ್ತು ಪಶು ಸಂಗೋಪನೆಗಾಗಿ ಜಾನುವಾರಗಳನ್ನೂ ಸ್ಥಳಾತರಿಸಬಹುದಾಗಿದೆ ಎಂದು ಸುಗ್ರೀವಾಜ್ಞೆಯಲ್ಲಿ ಉಲ್ಲೇಖಿಸಲಾಗಿದೆ.