Job Description: * ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ರೈತರಿಗೆ ಅನುಕೂಲವಾಗಲೆಂದು ಕೃಷಿಸಂಜೀವಿನಿ ಎಂಬ ನೂತನ ವಾಹನಗಳಿಗೆ ಚಾಲನೆ ನೀಡಿದರು, ಈ ಕೃಷಿಸಂಜೀವಿನಿ ವಾಹನಗಳು ರೈತರ ಹೊಲಗಳಿಗೆ ಹೋಗಿ ಮಣ್ಣು, ಕೀಟ ರೋಗ, ನೀರು ಪರೀಕ್ಷೆಯನ್ನು ಮಾಡುತ್ತವೆ, ಜೊತೆಗೆ ರೈತರಿಗೆ ತಾಂತ್ರಿಕ ನೆರವನ್ನು ನೀಡುವಲ್ಲಿ ಪ್ರಮುಖ ಪಾತ್ರ ವಹಿಸುವುದಾಗಿ ಕೃಷಿ ಇಲಾಖೆ ಮಾಹಿತಿಯನ್ನು ನೀಡಿದೆ. * ಪ್ರಸ್ತುತ ರಾಜ್ಯದಲ್ಲಿ ಕೃಷಿ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದ ಮೂಲಕ ಒಟ್ಟು 40 ವಾಹನಗಳಿಗೆ ಅವಕಾಶ ಕಲ್ಪಿಸಲಾಗಿದೆ. * ರೈತರು ಇನ್ನು ತಮ್ಮ ಕೃಷಿ ಸಮಸ್ಯೆಗಳನ್ನು ಕೃಷಿ ಇಲಾಖೆಗೆ ತಿಳಿಸುವ ಸಲುವಾಗಿ ಸಹಾಯವಾಣಿ 155313 ಫ್ರೀ ನಂಬರ್ ಗೆ ಕರೆಮಾಡಬಹುದು ಇದು ಆಯಾ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಹೋಗುತ್ತದೆ, ಇದರಿಂದ ರೈತರು ಕೃಷಿ ಸಮಸ್ಯೆಗಳನ್ನು ಹೇಳಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.