Job Description: * ಗುಜರಾತ್ ರಾಜ್ಯದ ಮಾಜಿ ಮುಖ್ಯಮಂತ್ರಿ, ಮಾಧವ ಸಿಂಗ್ ಸೋಲಂಕಿ ಯವರು ಇತ್ತೀಚಿಗೆ ತಮ್ಮ 94ನೇ ವಯಸ್ಸಿನಲ್ಲಿ ವಿಧಿವಶರಾಗಿದ್ದಾರೆ. * ಮಾಧವ್ ಸಿಂಗ್ ಸೋಲಂಕಿ ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ನಾಯಕರಾಗಿದ್ದರು ಮತ್ತು ಭಾರತದ ಮಾಜಿ ವಿದೇಶಾಂಗ ಸಚಿವರಾಗಿದ್ದರು. ಇವರು ನಾಲ್ಕು ಬಾರಿ ಗುಜರಾತ್ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ಇವರು 1980 ರ ದಶಕದಲ್ಲಿ ಗುಜರಾತ್ನಲ್ಲಿ ಅಧಿಕಾರಕ್ಕೆ ಬಂದಾಗ ಕ್ಷತ್ರಿಯ, ಹರಿಜನ, ಆದಿವಾಸಿ, ಮುಸ್ಲಿಂ (KHAM) ಸಮುದಾಯದ ಹೋರಾಟಕ್ಕೆ ಹೆಸರುವಾಸಿಯಾದ ರಾಜಕಾರಣಿಯಾಗಿದ್ದರು.