Job Description: * ಫೆಬ್ರವರಿ 14, 2019 ರಂದು "ಜಮ್ಮು-ಕಾಶ್ಮೀರದ" ಪುಲ್ವಾಮಾದಲ್ಲಿ ನಡೆದ ಸೈನಿಕರ ಮೇಲೆ ಜೈಷ್ ಇ ಮೊಹಮ್ಮದ್ ಉಗ್ರ ಸಂಘಟನೆ ಆತ್ಮಾಹುತಿ ಬಾಂಬ್ ದಾಳಿ ನಡೆಸಿತ್ತು, ಇದರಿಂದ ಸರಿಸುಮಾರು 44 ಯೋಧರು ಹುತಾತ್ಮರಾದರು. * ಈ ದಾಳಿಯ ಪ್ರತಿಕಾರವಾಗಿ ಭಾರತೀಯ ಸೇನೆಯು ಫೆಬ್ರುವರಿ 26, 2019 ರಂದು ಪಾಕಿಸ್ತಾನದ ಬಾಲಾಕೋಟ್ ಉಗ್ರರ ಶಿಬಿರದ ಮೇಲೆ ಸರ್ಜಿಕಲ್ ದಾಳಿಯನ್ನು ನಡೆಸಿತು, ಇದರಲ್ಲಿ 300ಕ್ಕೂ ಹೆಚ್ಚು ಉಗ್ರರ ಹತ್ಯೆಯಾಗಿದ್ದಾರೆ ಎಂದು ಪಾಕಿಸ್ತಾನ ಇದೀಗ ಒಪ್ಪಿಕೊಂಡಿದೆ. ಈ ವಿಷಯವನ್ನು ಪಾಕಿಸ್ತಾನದ ಮಾಜಿ ರಾಜತಾಂತ್ರಿಕ ಅಧಿಕಾರಿ ಆಘಾ ಹಿಲಾಲಿ ರವರು ಸುದ್ದಿಘೋಷ್ಠಿಯಲ್ಲಿ ಹೇಳಿಕೆಯನ್ನು ನೀಡಿದ್ದಾರೆ.