Job Description: * ಕೇಂದ್ರ ಗೃಹ ಸಚಿವ ಅಮಿತ್ ಷಾರವರು ಆನ್-ಲೈನ್ ಮೂಲಕ ಕಲ್ಲಿದ್ದಲು ಗಣಿಗಾರಿಕೆಗೆ ಅನುಮತಿ ಪಡೆಯುವ ಏಕ-ಗವಾಕ್ಷಿ ಅನುಮೋದನೆ ಪಡೆಯುವ ಯೋಜನೆಗೆ ಚಾಲನೆ ನೀಡಿದರು. * ಇದೀಗ ಕೇಂದ್ರ ಗೃಹ ಸಚಿವ ಅಮಿತ್ ಷಾರವರು ಕಲ್ಲಿದ್ದಲು ಕ್ಷೇತ್ರದಲ್ಲಿ ಪಾರದರ್ಶಕತೆ ತರುವ ನಿಟ್ಟಿನಲ್ಲಿ ಮತ್ತು ಸಂಪನ್ಮೂಲವನ್ನು ಸಮರ್ಥವಾಗಿ ಬಳಸಿಕೊಳ್ಳಲು ಕೇಂದ್ರ ಸರ್ಕಾರದ ಈ ಏಕ-ಗವಾಕ್ಷಿ ಯೋಜನೆ ಆರಂಭವಾಗಿದೆ ಎಂದು ತಿಳಿಸಿದ್ದಾರೆ. * ಭಾರತದ ಕಲ್ಲಿದ್ದಲು ಕ್ಷೇತ್ರ 5 ಟ್ರಿಲಿಯನ್ ಡಾಲರ್ ಆರ್ಥಿಕತೆಗೆ ದೊಡ್ಡ ಪಾಲು ಒದಗಿಸಲಿದೆ. ಈ ಕಲ್ಲಿದ್ದಲು ಕ್ಷೇತ್ರದಲ್ಲಿ ಕೆಲಸ ನಿರ್ವಹಿಸಲು ಬೇರೆ ಬೇರೆ ಜನರಿಗೆ ಈ ಯೋಜನೆಯಿಂದ ಅವಕಾಶ ದೊರೆಯಲಿದೆ ಎಂದು ತಿಳಿಸಿದ್ದಾರೆ.