Job Description: * ಸ್ವಾಮಿ ವಿವೇಕಾನಂದರ ಜನ್ಮದಿನವಾದ ಜನವರಿ 12 ರಂದು ರಾಷ್ಟ್ರೀಯ ಯುವ ದಿನವನ್ನು ಆಚರಿಸಲಾಗುತ್ತದೆ. 1984 ರಲ್ಲಿ ಭಾರತ ಸರ್ಕಾರ ಈ ದಿನವನ್ನು ರಾಷ್ಟ್ರೀಯ ಯುವ ದಿನವೆಂದು ಘೋಷಿಸಿತು, ಮತ್ತು 1985 ರಿಂದ ಈ ಕಾರ್ಯಕ್ರಮವನ್ನು ಭಾರತದಲ್ಲಿ ಪ್ರತಿವರ್ಷ ಆಚರಿಸಲಾಗುತ್ತದೆ. ವಿಶ್ವದ ಅತ್ಯಂತ ಪ್ರಸಿದ್ಧ ತತ್ವಜ್ಞಾನಿ ಅಥವಾ ಸನ್ಯಾಸಿಗಳಲ್ಲಿ ಸ್ವಾಮಿ ವಿವೇಕಾನಂದರು ಕೂಡ ಒಬ್ಬರು ಆಗಿದ್ದವರು. * ಪ್ರಪಂಚದಲ್ಲೇ ಅತೀಹೆಚ್ಚು ಯುವಕರನ್ನು ಹೊಂದಿರುವ ದೇಶ ಭಾರತ. ರಾಷ್ಟ್ರದ ಅಭಿವೃದ್ಧಿಯಲ್ಲಿ ಭಾರತದ ಯುವ ಜನಾಂಗದ ಪಾತ್ರ ಪ್ರಮುಖವಾಗಿದೆ, ಮತ್ತು ಭಾರತದ ಶಕ್ತಿಯೂ ಯುವ ಜನಾಂಗವೇ ಆಗಿದೆ ಎಂದು ತಿಳಿಸಿದೆ. ಆದ್ದರಿಂದ ಜನವರಿ 12 ರಂದು ರಾಷ್ಟ್ರೀಯ ಯುವ ದಿನದ ಜೊತೆಗೆ ಸ್ವಾಮಿ ವಿವೇಕಾನಂದರ ಜನ್ಮದಿನವನ್ನು ಆಚರಿಸಲಾಗುತ್ತದೆ.