Job Description: * ಇತ್ತೀಚೆಗೆ ಭಾರತ ಸರ್ಕಾರವು ಜಮ್ಮು ಮತ್ತು ಕಾಶ್ಮೀರದ ಕೈಗಾರಿಕಾ ಅಭಿವೃದ್ಧಿಯನ್ನು ಹೆಚ್ಚಿಸುವ ಸಲುವಾಗಿ 28,400 ಕೋಟಿ ರೂಗಳ ಯೋಜನೆಗೆ, ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅನುಮೋದನೆ ನೀಡಲಾಯಿತು. ಮತ್ತು ಈ ಯೋಜನೆಯು ಹಣವನ್ನು 2037 ರವರೆಗೆ ಜಮ್ಮು ಮತ್ತು ಕಾಶ್ಮೀರದ ಕೈಗಾರಿಕಾ ಪ್ರದೇಶವನ್ನು ಅಭಿವೃದ್ಧಿಪಡಿಸಲು ಉಪಯೋಗಿಸಲಾಗುವದು. * ಈ ಯೋಜನೆಯಿಂದಾಗಿ ಜಮ್ಮು ಮತ್ತು ಕಾಶ್ಮೀರದ ಕೈಗಾರಿಕಾ ಪ್ರದೇಶದಲ್ಲಿ 4.5 ಲಕ್ಷ ನೇರ ಮತ್ತು ಪರೋಕ್ಷ ಉದ್ಯೋಗವನ್ನು ನೀಡಿದಂತಾಗುತ್ತದೆ ಎಂದು ಸರ್ಕಾರ ತಿಳಿಸಿದೆ. * ಪ್ರಸ್ತುತ ಕೇಂದ್ರ ಸರ್ಕಾರವು ಇಲ್ಲಿಯತನಕ ಒಟ್ಟು 1123 ಕೋಟಿ ರೂ.ಗಳನ್ನು ಜಮ್ಮು ಮತ್ತು ಕಾಶ್ಮೀರದ ಕೈಗಾರಿಕಾ ಪ್ರದೇಶದಲ್ಲಿ ಹೂಡಿಕೆ ಮಾಡಲಾಗಿದೆ ಎಂದು ತಿಳಿಸಿದೆ.