Job Description: * ತುಮಕೂರು ಸಿದ್ದಗಂಗಾ ಮಠದ ಲಿಂಗೈಕ್ಯ ಡಾ. ಶಿವಕುಮಾರ ಶ್ರೀಗಳ ಪುಣ್ಯಸ್ಮರಣೆ ದಿನವನ್ನು 'ದಾಸೋಹ ದಿನ' ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಶ್ರೀಗಳ 2ನೇ ಪುಣ್ಯಸ್ಮರಣೆ ದಿನದ ಕಾರ್ಯಕ್ರಮದಲ್ಲಿ ಘೋಷಿಸಿದ್ದಾರೆ. * ಶೀಘ್ರದಲ್ಲೇ ಕರ್ನಾಟಕ ಸರ್ಕಾರದಿಂದ ಶ್ರೀಗಳ ಪುಣ್ಯಸ್ಮರಣೆ ದಿನವನ್ನು "ದಾಸೋಹ ದಿನ" ಎಂದು ಅಧಿಕೃತ ಘೋಷಣೆ ಹೊರಬರಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪನವರು ತಿಳಿಸಿದರು. * ಕರ್ನಾಟಕ ರಾಜ್ಯ ಸರ್ಕಾರವು 25 ಕೋಟಿ ರೂ. ದೇಣಿಗೆಯನ್ನು ಶ್ರೀಗಳ ಜನ್ಮ ಸ್ಥಳವಾದ ವೀರಪುರ ಗ್ರಾಮಕ್ಕೆ ನೀಡಿರುವ ಕುರಿತು ತಿಳಿಸಿದರು, ಮುಂದಿನ ದಿನಗಳಲ್ಲಿ ಈ ಗ್ರಾಮವನ್ನು ತೀರ್ಥಸ್ಥಳವಾಗುವಂತೆ ಮಾಡುವ ಗುರಿಯನ್ನು ಸರ್ಕಾರ ಹೊಂದಿದೆ.