Job Description: * ಪ್ರತಿ ವರ್ಷವು ದೇಶದ ಅತ್ಯುತ್ತಮ ಮುಖ್ಯಮಂತ್ರಿಗಳ ಪಟ್ಟಿಯನ್ನು, ಇಂಡಿಯಾ ಟುಡೆ ಗ್ರೂಪ್-ಕಾರ್ವಿ ಇನ್ಸೈಟ್ಸ್ ಮೂಡ್ ಆಫ್ ದಿ ನೇಷನ್ (MOTN) ಎಂಬ ಸಂಸ್ಥೆ ಪ್ರಕಟಿಸುತ್ತ ಬಂದಿದ್ದು, ಇದೀಗ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿರುವ ಯೋಗಿ ಆದಿತ್ಯನಾಥ, ಸತತ 4ನೇ ಬಾರಿ ನಂ.1 ಸ್ಥಾನ ಪಡೆದಿದ್ದಾರೆ, ಜೊತೆಗೆ ಇವರು ಪ್ರಸ್ತುತ ಭಾರತ ದೇಶದ ಅತ್ಯಂತ ಕಿರಿಯ ಮುಖ್ಯಮಂತ್ರಿಯಾಗಿದ್ದಾರೆ. * ಇತ್ತೀಚೆಗೆ ನಡೆದ 2021 ರ ಚುನಾವಣೆಯಲ್ಲಿ ಶೇಕಡಾ 25ರಷ್ಟು ಮತಗಳನ್ನು ಪಡೆದು ಯೋಗಿ ಆದಿತ್ಯನಾಥ್ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ. * ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಶೇಕಡಾ 15ರಷ್ಟು ಮತಗಳನ್ನು ಪಡೆದಿದ್ದಾರೆ. * ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಶೇಕಡಾ 9ರಷ್ಟು ಮತಗಳನ್ನು ಪಡೆದಿದ್ದಾರೆ. * ಬಿಹಾರ ಸಿಎಂ ನಿತೀಶ್ ಕುಮಾರ್ ಮತ್ತು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಶೇಕಡಾ 7ರಷ್ಟು ಮತಗಳನ್ನು ಪಡೆದಿದ್ದಾರೆ. * ಒಡಿಶಾ ಸಿಎಂ ನವೀನ್ ಪಟ್ನಾಯಕ್ ಮತ್ತು ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಶೇಕಡಾ 6ರಷ್ಟು ಮತ ಪಡೆದಿದ್ದಾರೆ. ಎಂದು ಇಂಡಿಯಾ ಟುಡೆ ಗ್ರೂಪ್-ಕಾರ್ವಿ ಇನ್ಸೈಟ್ಸ್ ಮೂಡ್ ಆಫ್ ದಿ ನೇಷನ್ ಮಾಹಿತಿಯನ್ನು ನೀಡಿದೆ.