Job Description: * ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಆರೋಗ್ಯ ಸೇವೆಯ ಯೋಜನೆ ಅಡಿಯಲ್ಲಿ ಆಯುಷ್ಮಾನ ಭಾರತ ಆರೋಗ್ಯ ಕರ್ನಾಟಕ ಸೇವೆ ಜಾರಿಗೆ ಬಂದಿದ್ದು, ಈ ಯೋಜನೆ ಅಡಿಯಲ್ಲಿ ಅತಿ ಹೆಚ್ಚು ರೋಗಿಗಳು ಚಿತ್ರದುರ್ಗದ ಜಿಲ್ಲಾ ಆಸ್ಪತ್ರೆ ಹಾಗೂ ಚಳ್ಳಕೆರೆ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಸೇವೆಯನ್ನು ಪಡೆದಿದ್ದಾರೆ. ರೋಗಿಗಳ ಉಪಚಾರಕ್ಕೆ ಸ್ಪಂದಿಸಿದ ಆಸ್ಪತ್ರೆಗಳಿಗೆ ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರವು ಅಭಿನಂದನೆಗಳನ್ನು ತಿಳಿಸಿದೆ. * ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ ಪ್ರತಿ ಮೂರು ತಿಂಗಳಿಗೆ ನಡೆಸುವ ಪರಿಶೀಲನೆಯಲ್ಲಿ ಸತತ ಎರಡು ಬಾರಿ ಚಿತ್ರದುರ್ಗ ಜಿಲ್ಲೆ ಮೊದಲ ಸ್ಥಾನದಲ್ಲಿದೆ. 2019 ರಿಂದ ಈವರೆಗೆ ಚಿತ್ರದುರ್ಗ ಜಿಲ್ಲೆಯಲ್ಲಿ 12000ಕ್ಕೂ ಹೆಚ್ಚು ರೋಗಿಗಳು ಉಚಿತ ಚಿಕಿತ್ಸೆ ಪಡೆಯುವಲ್ಲಿ ಸಕ್ರಿಯರಾಗಿದ್ದಾರೆ.