Job Description: * ಅರಣ್ಯ ಇಲಾಖೆ ಆಯೋಜಿಸಿರುವ ಗದಗ ಜಿಲ್ಲೆಯಲ್ಲಿನ ಕಪ್ಪತ ಉತ್ಸವ-2021 ಉದ್ಘಾಟಣೆಯ ಕಾರ್ಯಕ್ರಮವನ್ನು ಸಣ್ಣ ಕೈಗಾರಿಕೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಚಾಲನೆ ನೀಡಿದರು. * ಉತ್ತರ ಕರ್ನಾಟಕದ ಸಹ್ಯಾದ್ರಿ ಎಂದು ಪ್ರಖ್ಯಾತಿ ಪಡೆದಿರುವ ಗದಗ ಜಿಲ್ಲೆಯ ಕಪ್ಪತಗುಡ್ಡ ಅರಣ್ಯ ಪ್ರದೇಶವು ಅನೇಕ ಔಷಧೀಯ ಸಸ್ಯ ಸಂಪತ್ತನ್ನು ಹೊಂದಿದ್ದು, ಕರ್ನಾಟಕ ಸರ್ಕಾರವು ಗದಗ ಜಿಲ್ಲೆಯ ಕಪ್ಪತಗುಡ್ಡ ಅರಣ್ಯ ಪದೇಶದ ರಕ್ಷಣೆ ನೀಡಲು ಬದ್ಧವಾಗಿದೆ, ಹಾಗೂ ಪರಿಸರ ಸಂಕ್ಷಣೆ ನಮೆಲ್ಲರ ಜವಾಬ್ದಾರಿಯಾಗಿದೆ ಎಂದು ಸಚಿವ ಸಿ.ಸಿ.ಪಾಟೀಲ ಅವರು ತಿಳಿಸಿದರು.