Job Description: * 72ನೇ ಗಣರಾಜ್ಯೋತ್ಸವದ ಪ್ರಯುಕ್ತ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂಡಿಯಾಗೇಟ್ ಬಳಿ ಇರುವ ಅಮರ್ ಜವಾನ್ ಜ್ಯೋತಿಯಲ್ಲಿ ಹುತಾತ್ಮ ವೀರ ಯೋಧರಿಗೆ ನಮನ ಅರ್ಪಿಸಿದರು, ಮತ್ತು ರಾಷ್ಟ್ರಗೀತೆ ಮೊಳಗಿಸಲಾಯಿತು ನಂತರ ಬಂದೂಕುಗಳ ಮೂಲಕ ಗೌರವ ವಂದನೆಯನ್ನು ನೀಡಲಾಯಿತು. * ರಾಷ್ಟ್ರಪತಿ ರಾಮನಾಥ್ ಕೋವಿಂದ ಅವರು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಧ್ವಜಾರೋಹಣ ನೆರವೇರಿಸಿ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ನೀಡಿದರು. * ಈ ವರ್ಷದ ಗಣರಾಜ್ಯೋತ್ಸವದ ಪರೇಡನ ರಾಜಪಥದಲ್ಲಿ ಒಟ್ಟಾರೆ 31 ಸ್ತಬ್ದಚಿತ್ರಗಳು ಪ್ರದರ್ಶನ ಮಾಡಲಾಯಿತು. * ಇನ್ನು ಕರ್ನಾಟಕದಿಂದ ವಿಜಯನಗರ ಸಾಮ್ರಾಜ್ಯದ ಸ್ತಬ್ದ ಚಿತ್ರ ಎಲ್ಲರ ಗಮನಸೆಳೆಯಿತು.