Job Description: * ಕರ್ನಾಟಕ ರಾಜ್ಯ ಸರ್ಕಾರವು ಮೊದಲ ಬಾರಿಗೆ ಗ್ರಾಮೀಣ ಜನರಿಗೆ ಉಪಯೋಗವಾಗಲೆಂದು "ಹಳ್ಳಿ ಕಡೆಗೆ ಡಿಸಿ" ಎಂಬ ವಿನೂತನ ಕಾರ್ಯಕ್ರಮಕ್ಕೆ ಉಡುಪಿ ಜಿಲ್ಲೆಯಲ್ಲಿ ಜನವರಿ 30 ಕ್ಕೆ ಚಾಲನೆ ನೀಡಲಿದೆ. ಈ ಯೋಜನೆ ಯಶಸ್ಸುಗೊಂಡರೆ, ನಂತರ ದಿನಗಳಲ್ಲಿ ಬೇರೆ ಜಿಲ್ಲೆಗಳಲ್ಲಿ ಈ ಯೋಜನೆಯನ್ನು ವಿಸ್ತರಿಸಲಾಗುವದು ಎಂದು ಸರ್ಕಾರ ತಿಳಿಸಿದೆ. * ಈ ಯೋಜನೆ ಇಂದ ಗ್ರಾಮಗಳಿಗೆ ಜಿಲ್ಲಾಧಿಕಾರಿಗಳು ಭೇಟಿ ನೀಡಿ ಕಂದಾಯ ಇಲಾಖೆಗೆ ಸಂಬಂಧಿಸಿದ ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡಲಿದ್ದಾರೆ. ಈ "ಹಳ್ಳಿ ಕಡೆಗೆ ಡಿಸಿ" ಎಂಬ ಕಾರ್ಯಕ್ರಮದ ಮೂಲಕ ಪ್ರತಿ ತಿಂಗಳ 3 ನೇ ಶನಿವಾರ ಜಿಲ್ಲಾಧಿಕಾರಿಗಳು ಗ್ರಾಮಗಳಿಗೆ ತೆರಳಿ ಕಂದಾಯ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳಿಗೆ ಪರಿಹಾರ ನೀಡಲಿದ್ದಾರೆ ಎಂದು ಸರ್ಕಾರ ತಿಳಿಸಿದೆ.