Job Description: * ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಇತ್ತೀಚಿಗೆ ರಾಜ್ಯದಲ್ಲಿ ಕಿತ್ತೂರು ರಾಣಿ ಚನ್ನಮ್ಮ ಬಾಲಕಿಯರ ಸೈನಿಕ ವಸತಿ ಶಾಲೆಯ 'ಸರ್ದಾರ್ ವಲ್ಲಭಭಾಯಿ ಪಟೇಲ್ ನಿಲಯ' ಹಾಗೂ 'ನೇತಾಜಿ ಸುಭಾಷ್ ಚಂದ್ರ ಬೋಸ್ ನಿಲಯ' ಎಂಬ ವಸತಿ ಶಾಲೆಯ ಶಂಕುಸ್ಥಾಪನೆಗೆ ಚಾಲನೆ ನೀಡಿದರು. * ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡಲು ಕಿತ್ತೂರು ರಾಣಿ ಚೆನ್ನಮ್ಮ ಬಾಲಕಿಯರ ಸೈನಿಕ ವಸತಿ ಶಾಲೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದೆ ಹಾಗೂ ಇದು ದೇಶದ ಏಕೈಕ ಬಾಲಕಿಯರ ಸೈನಿಕ ವಸತಿ ಶಾಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು, ಇದು ರಾಜ್ಯಕ್ಕೆ ಹೆಮ್ಮೆ ತರುವ ವಿಷಯವಾಗಿದೆ.