Job Description: * "ಮಾತೃಪೂರ್ಣ" ಕರ್ನಾಟಕ ರಾಜ್ಯ ಸರ್ಕಾರದ ಯೋಜನೆಯಾಗಿದ್ದು, ಈ ಯೋಜನೆಯ ಮೂಲಕ ಗರ್ಭಿಣಿ ಮಹಿಳೆಯರು ಮತ್ತು ಮಕ್ಕಳಿಗೆ ಪೌಷ್ಟಿಕ ಆಹಾರವನ್ನು ಅಂಗನವಾಡಿ ಕೇಂದ್ರಗಳಲ್ಲಿ ಒದಗಿಸಲಾಗುತ್ತದೆ. * ಕರ್ನಾಟಕ ರಾಜ್ಯ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಶಶಿಕಲಾ ಜೊಲ್ಲೆಯವರು "ಮಾತೃಪೂರ್ಣ" ಯೋಜನೆಯಡಿಲ್ಲಿ ಗರ್ಭಿಣಿ ಮತ್ತು ಬಾಣಂತಿ ತಾಯಿಂದರಿಗಾಗಿ ಮಧ್ಯಾಹ್ನದ ಬಿಸಿ ಊಟವನ್ನು ಅಂಗನವಾಡಿ ಕೇಂದ್ರಗಳಲ್ಲಿ ಶೀಘ್ರದಲ್ಲೇ ನೀಡಲಾಗುತ್ತದೆ ಎಂದು ತಿಳಿಸಿದ್ದು, ಪ್ರಸ್ತುತ ಕೋವಿಡ್-19 ಕಾರಣದಿಂದಾಗಿ ಅಂಗನವಾಡಿ ಕೇಂದ್ರಗಳು ಮುಚ್ಚಲಾಗಿದೆ. * ಬರುವ ದಿನಗಳಲ್ಲಿ ಅಂಗನವಾಡಿ ಕೇಂದ್ರ ತೆರೆದ ಬಳಿಕ "ಮಾತೃಪೂರ್ಣ" ಯೋಜನೆಯಡಿಲ್ಲಿ ಬಿಸಿಯೂಟ ಪೂರೈಕೆ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ಸಚಿವೆ ನೀಡಿದ್ದಾರೆ.