Job Description: * ಮೊರಾರ್ಜಿ ದೇಸಾಯಿ ರಾಷ್ಟ್ರೀಯ ಯೋಗ ಸಂಸ್ಥೆಯು, ಆಯುಷ್ ಸಚಿವಾಲಯದ ಜೊತೆಗೂಡಿ ಸಾಮಾನ್ಯ ಯೋಗ ಪ್ರೋಟೋಕಾಲ್ ತರಬೇತಿ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ. * ಭಾರತದಲ್ಲಿ ಮತ್ತು ವಿದೇಶಗಳಲ್ಲಿ ಯೋಗಾಭ್ಯಾಸವನ್ನು ಕಲಿಯುವದು ಹಾಗೂ ಒಗ್ಗೂಡಿಸಿಕೊಳ್ಳುವ ಪ್ರಯತ್ನದ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವನ್ನು ಆಯುಷ್ ಸಚಿವಾಲಯ ಆರಂಭಿಸಿದೆ. * ಈ ಕಾರ್ಯಕ್ರಮದಿಂದ ಜನರಲ್ಲಿ ಯೋಗದ ಜ್ಞಾನ ಮತ್ತು ಅಭ್ಯಾಸವನ್ನು ಉತ್ತೇಜಿಸುವ ಸಲುವಾಗಿ ಹಾಗೂ ಜನರ ದೈಹಿಕ, ಭಾವನಾತ್ಮಕ, ಮಾನಸಿಕ ಮತ್ತು ಆಧ್ಯಾತ್ಮಿಕ ಆರೋಗ್ಯವನ್ನು ಬದಲಾಯಿಸುವ ಅಭ್ಯಾಸದ ವಿಧಾನಗಳನ್ನು ಈ ಕಾರ್ಯಕ್ರಮ ಒಳಗೊಂಡಿದೆ, ಇದನ್ನು ಪ್ರತಿವರ್ಷ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಸಂದರ್ಭದಲ್ಲಿ ನಡೆಸಲಾಗುವುದು ಎಂದು ಆಯುಷ್ ಸಚಿವಾಲಯ ತಿಳಿಸಿದೆ.