Job Description: * ಬಿಜೆಪಿ ಹಾಗೂ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಬಸವರಾಜ್ ಹೊರಟ್ಟಿ ವಿಧಾನ ಪರಿಷತ್ ಸಭಾಪತಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದು, ಉಪಸಭಾಪತಿ ಎಂ.ಕೆ. ಪ್ರಾಣೇಶ್ ಅವರು ನೇಮಕಗೊಂಡಿದ್ದಾರೆ. * ಈ ಮೊದಲು ವಿಧಾನ ಪರಿಷತ್ ಸಭಾಪತಿ ಪ್ರತಾಪ್ಚಂದ್ರ ಶೆಟ್ಟಿಯವರಿದ್ದರು, ಅವರು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕಾರಣದಿಂದ ಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಸಲಾಗಿತ್ತು ಅದರಲ್ಲಿ ಅವಿರೋಧವಾಗಿ ಬಸವರಾಜ್ ಹೊರಟ್ಟಿ ಆಯ್ಕೆಯಾಗಿದ್ದಾರೆ. * ಕಾಂಗ್ರೆಸ್ ಅಭ್ಯರ್ಥಿಯಾಗಿ ನಜೀರ್ ಅಹ್ಮದ್ ರವರು ಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು, ಆದರೆ ಕಾಂಗ್ರೆಸ್ ಸದಸ್ಯರು ಜಾನುವಾರು ಹತ್ಯೆ ನಿಷೇಧ ಕಾಯ್ದೆ ಜಾರಿಯ ವಿರುದ್ಧ ಧರಣಿ ಮುಂದುವರಸಿದ್ದರಿಂದಾಗಿ ಕಾಂಗ್ರೆಸ್ ಸದಸ್ಯರು ಸಭಾಪತಿ ಚುನಾವಣೆಯಿಂದ ದೂರ ಉಳಿದುಕೊಂಡ ಕಾರಣದಿಂದಾಗಿ ಬಸವರಾಜ ಹೊರಟ್ಟಿ ಅವರನ್ನು ನೂತನ ಸಭಾಪತಿಯಾಗಿ ಆಯ್ಕೆ ಮಾಡಲಾಗಿದೆ ಎಂದು ಉಪ ಸಭಾಪತಿ ಎಂ.ಕೆ. ಪ್ರಾಣೇಶ್ ಮಾಹಿತಿ ನೀಡಿದ್ದಾರೆ. * ಬಸವರಾಜ್ ಹೊರಟ್ಟಿಯವರು ಜೆಡಿಎಸ್'ನ MLC ಯಾಗಿದ್ದು, ಇವರು 21 ಜೂನ್ 2018 ರಿಂದ 12 ಡಿಸೆಂಬರ್ 2018 ರವರೆಗೆ ಕರ್ನಾಟಕ ವಿಧಾನ ಪರಿಷತ್ತಿನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.