Job Description: * ಇತ್ತೀಚಿಗೆ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ 5 ಎಕರೆಗಿಂತ ಹೆಚ್ಚಿನ ಜಮೀನು ಹೊಂದಿದ, ಮತ್ತು ಮನೆಗಳಲ್ಲಿ ಬೈಕ್, ಟೀವಿ, ಫ್ರಿಡ್ಜ್ ಹೊಂದಿದವರ ಪಡಿತರ ಚೀಟಿ(BPL)ರದ್ದು ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ನೀಡಿದ್ದಾರೆ. * ವಾರ್ಷಿಕ 1.20 ಲಕ್ಷಕ್ಕಿಂತ ಹೆಚ್ಚು ಆದಾಯವನ್ನು ಹೊಂದಿದ ಸರ್ಕಾರಿ ಹಾಗೂ ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುವ ಜನರು ಮತ್ತು 5 ಎಕರೆಗಿಂತ ಹೆಚ್ಚಿನ ಜಮೀನು, ಮನೆಯಲ್ಲಿ ಬೈಕ್, ಟೀವಿ, ಫ್ರಿಡ್ಜ್ ಇದ್ದವರ ಪಡಿತರ ಚೀಟಿ ರದ್ದು ಮಾಡಲಾಗುತ್ತದೆ. ಸರ್ಕಾರವು ವಾರ್ಷಿಕ ಆದಾಯ ಮತ್ತು ಅಸ್ತಿಯನ್ನು ಹೊಂದಿದ ಜನರು ಬಿಪಿಎಲ್(BPL)ಕಾರ್ಡ್ ಹೊಂದಿದ್ದರೆ ಸರ್ಕಾರಕ್ಕೆ ಹಿಂದಿರುಗಿಸಲು ಮಾರ್ಚ್ ತಿಂಗಳಿನ ಅಂತ್ಯದವರೆಗೆ ಸಮಯ ನೀಡಲಾಗಿದೆ ಎಂದು ತಿಳಿಸಿದ್ದಾರೆ.