Job Description: * ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್'ರವರು ಈ ವರ್ಷ ಆನ್ಲೈನ್ನಲ್ಲಿ ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮ ನಡೆಯಲಿದೆ ಎಂದು ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ, ಈ ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮವು ಪ್ರಧಾನಿ ನರೇಂದ್ರ ಮೋದಿ ಮತ್ತು ವಿದ್ಯಾರ್ಥಿಗಳೊಂದಿಗೆ ಪರೀಕ್ಷೆ ಕುರಿತು ನಡೆಸುವ ಸಂವಾದವಾಗಿದೆ. * ಈ ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮಕ್ಕೆ ನೋಂದಣಿ ಪ್ರಾರಂಭವಾಗಿ ಇದು ಮಾರ್ಚ್ 14 ರಂದು ನೋಂದಣಿ ಮುಕ್ತಾಯಗೊಳ್ಳಲಿದೆ. * ಕಳೆದ ವರ್ಷ ಫೆ.16ರಂದು ಈ ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮದ ಮೊದಲ ಆವೃತ್ತಿ ತಾಲ್ಕಟೋರಾ ಸ್ಟೇಡಿಯಂನಲ್ಲಿ ನಡೆಸಲಾಗಿತ್ತು, ಈ ಕಾರ್ಯಕ್ರಮವು ಪ್ರಧಾನಿ ಮೋದಿಯವರು ಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳೊಂದಿಗೆ ನಡೆಸಿದ ಸಂವಾದವಾಗಿತ್ತು.