Job Description: * ಕರ್ನಾಟಕ ರಾಜ್ಯದ ಕಂದಾಯ ಸಚಿವರಾಗಿರುವ ಆರ್.ಅಶೋಕ್'ರವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಫೆಬ್ರವರಿ20, 2021ರಂದು ಚಾಲನೆ ನೀಡಿದರು. * ರಾಜ್ಯ ಸರ್ಕಾರದ ಆದೇಶದಂತೆ ಪ್ರತಿ ತಿಂಗಳ ಮೂರನೇಯ ಶನಿವಾರ ಜಿಲ್ಲಾಧಿಕಾರಿಗಳು ಮತ್ತು ತಾಲೂಕುಗಳ ತಹಶೀಲ್ದಾರರು ಜಿಲ್ಲೆಯ ಗ್ರಾಮಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆ ವರೆಗೆ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಜಿಲ್ಲಾಧಿಕಾರಿಗಳ ನಡೆ-ಹಳ್ಳಿ ಕಡೆ ಕಾರ್ಯಗಳು: * ಜಿಲ್ಲಾಧಿಕಾರಿಗಳು ಮತ್ತು ತಹಶೀಲ್ದಾರರು ಭೇಟಿ ನೀಡಿದ ಗ್ರಾಮದಲ್ಲಿನ ಎಲ್ಲಾ ಪಹಣಿಯಲ್ಲಿನ ಲೋಪದೋಷಗಳನ್ನು ಬಗ್ಗೆ ಎಚ್ಚರವಹಿಸುವದು ಮತ್ತು ಗ್ರಾಮದ ಎಲ್ಲಾ ಅರ್ಹ ವ್ಯಕ್ತಿಗಳಿಗೆ ಪಿಂಚಣಿ ಸೌಲಭ್ಯವನ್ನು ಕಲ್ಪಿಸಿಕೊಡುವದು, ಹಾಗೂ ಗ್ರಾಮದಲ್ಲಿ ಸ್ಮಶಾನವಿಲ್ಲದಿದ್ದಲ್ಲಿ ಸರ್ಕಾರದ ಆದೇಶದಂತೆ ಕ್ರಮವಹಿಸುವುದು, ಸರ್ಕಾರಿ ಜಮೀನು ಅಕ್ರಮ ಒತ್ತುವರಿ ತೆರವುಗೊಳಿಸುವುದು. ಆಧಾರ ಕಾರ್ಡಿನ ಅನೂಕೂಲತೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಪ್ರವಾಹದ ಹಾನಿ ತಡೆಗಟ್ಟಲು ಸಲಹೆ ನೀಡುವುದು, ಅತಿವೃಷ್ಠಿ, ಅನಾವೃಷ್ಠಿ ಎದುರಿಸಲು ಮುಂಜಾಗೃತೆ ಕ್ರಮವಹಿಸುವುದು.