Job Description: * ದೇಶದ ಮೊದಲ ಸಂಪೂರ್ಣ ಹವಾನಿಯಂತ್ರಿತ ರೈಲ್ವೇ ನಿಲ್ದಾಣವನ್ನು ಬೆಂಗಳೂರು ಹೊಂದಲಿದೆ, ವಿಮಾನ ನಿಲ್ದಾಣಗಳು ಮೂಲ ಸೌಕರ್ಯಗಳಿಗೆ ಹೋಲಿಸಿದರೆ ರೈಲ್ವೇ ನಿಲ್ದಾಣಗಳಲ್ಲಿ ಮೂಲ ಸೌಕರ್ಯಗಳ ಕೊರತೆ ಹೆಚ್ಚಾಗಿ ಕಂಡು ಬರುತ್ತದೆ ಆದರೆ ಬೆಂಗಳೂರಿನ ಬೈಯಪ್ಪನಹಳ್ಳಿ ರೈಲ್ವೆ ನಿಲ್ದಾಣವನ್ನು ವಿಮಾನ ನಿಲ್ದಾಣದ ಮಟ್ಟದ ಸೌರ್ಕಯ ಕೊಡುವ ನಿಟ್ಟಿನಲ್ಲಿ ಭಾರತೀಯ ರೈಲ್ವೇ ಅಭಿವೃದ್ಧಿಪಡಿಸುತ್ತಿದೆ ಹಾಗೂ ಇದು ದೇಶದ ಮೊದಲ ಸಂಪೂರ್ಣ ಹವಾನಿಯಂತ್ರಿತ ರೈಲ್ವೇ ನಿಲ್ದಾಣವಾಗಿ ಹೊರಹೊಮ್ಮಲಿದೆ. * ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮಾದರಿಯಲ್ಲಿ ಕೇಂದ್ರೀಯ ಹವಾ ನಿಯಂತ್ರಣ ವ್ಯವಸ್ಥೆ ಸರ್.ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಅನ್ನು, 4,200 ಚದರ ಮೀಟರ್ ವಿಸ್ತೀರ್ಣದಲ್ಲಿ ನಿರ್ಮಿಸಲಾದ ಈ ನಿಲ್ದಾಣವು ಪ್ರತಿನಿತ್ಯ 50,000ಕ್ಕೂ ಹೆಚ್ಚು ಪ್ರಯಾಣಿಕರನ್ನು ನಿಭಾಯಿಸಲಿದ್ದು, ದಿನವೂ 50 ರೈಲುಗಳನ್ನು ನಿಭಾಯಿಸುವ ಸಾಮರ್ಥ್ಯವನ್ನು ಹೊಂದಿದೆ ಮತ್ತು 7 ಪ್ಲಾಟ್ಫಾರಂಗಳನ್ನೂ ಹೊಂದಿ ಒಟ್ಟಾರೆ 314 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣ ಮಾಡಿದೆ. * ಭಾರತೀಯ ರೈಲ್ವೆ ನಿರ್ಮಾಣ ಮಾಡಿರುವ ದೇಶದ ಮೊದಲ ಸಂಪೂರ್ಣ ಹವಾನಿಯಂತ್ರಿತ ರೈಲ್ವೇ ನಿಲ್ದಾಣದಲ್ಲಿ ಪ್ರಯಾಣಿಕ ಮಾಹಿತಿ ವ್ಯವಸ್ಥೆ, ಫುಡ್ ಕೋರ್ಟ್, VIPಲೌಂಜ್ ಹೀಗೆ ಹಲವು ಅಂದರೆ ವಿಮಾನ ನಿಲ್ದಾಣದ ಸೌಕರ್ಯಗಳನ್ನು ಇಲ್ಲಿಯ ಪ್ರಯಾಣಿಕರಿಗೆ ನೀಡಲಾಗುತ್ತದೆ ಎಂದು ರೈಲ್ವೇ ಸಚಿವಾಲಯ ತಿಳಿಸಿದೆ.