Job Description: * ಕೇಂದ್ರ ಸರ್ಕಾರ ನೂತನ ಕೃಷಿ ಕಾಯ್ದೆ ಜಾರಿಗೆ ತಂದಿದೆ, ಸದ್ಯ ಇದೀಗ ಕರ್ನಾಟಕ ಸರ್ಕಾರ ರಾಜ್ಯದಲ್ಲಿ ಖಾಸಗಿ ಕೃಷಿ ಮಾರುಕಟ್ಟೆಯನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಹುಚ್ಚವನಹಳ್ಳಿ ಬಳಿ 106 ಎಕರೆ ಪ್ರದೇಶದಲ್ಲಿ ನಿರ್ಮಾಣ ಮಾಡಲು ಅನುಮತಿಯನ್ನು ನೀಡಿದೆ. * ಚಿತ್ರದುರ್ಗ ಜಿಲ್ಲೆಯಲ್ಲಿ ಖಾಸಗಿ ಕೃಷಿ ಮಾರುಕಟ್ಟೆಯು ಅಕ್ಷಯ ಫುಡ್ ಪಾರ್ಕ್ ಲಿಮಿಟೆಡ್ ಎಂಬ ಕಂಪನಿಯು ಪ್ರಾರಂಭಮಾಡಲಿದೆ, ಮುಂದಿನ ದಿನಗಳಲ್ಲಿ ಅಂದರೆ ಏಪ್ರಿಲ್ ತಿಂಗಳಲ್ಲಿ ಮಾರುಕಟ್ಟೆ ನಿರ್ಮಾಣ ಕಾರ್ಯಾ ಪ್ರಾರಂಭವಾಗಲಿದೆ. * ಕೃಷಿ ಕಾಯ್ದೆ ವಿರೋಧಿಸಿ ನವದೆಹಲಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ, ರಾಜ್ಯದ ಮೊದಲ ಖಾಸಗಿ ಕೃಷಿ ಮಾರುಕಟ್ಟೆ ಇದಾಗಲಿದೆ ಸದ್ಯ ಎಪಿಎಂಸಿ ಕಾಯ್ದೆ ತಿದ್ದುಪಡಿ ಜಾರಿಗೆ ಬಂದ ನಂತರ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ. * ಈ ಅಕ್ಷಯ ಫುಡ್ ಪಾರ್ಕ್'ನಲ್ಲಿ ರೈತರು ಬೆಳೆದ ಕೃಷಿ ಉತ್ಪನ್ನಗಳನ್ನು ಸಂಗ್ರಹ ಮಾಡಿ ಉತ್ತಮ ದರ(ದಾರಾನಿ) ಸಿಕ್ಕಾಗ ಮಾರಾಟ ಮಾಡಲು ಸಹ ಅವಕಾಶ ನೀಡಲಾಗುತ್ತದೆ ಎಂದು ಅಕ್ಷಯ ಫುಡ್ ಪಾರ್ಕ್ ವ್ಯವಸ್ಥಾಪಕ ನಿರ್ದೇಶಕ ಎಂ.ನಾರಾಯಣ ಸ್ವಾಮಿ ತಿಳಿಸಿದ್ದಾರೆ. * ರಾಷ್ಟ್ರೀಯ ಕೃಷಿ ಮಾರುಕಟ್ಟೆ "ಇ- ನಾಮ್" ಅಂತರ್ಜಾಲದ ವ್ಯವಸ್ಥೆಯ ಮೂಲಕ ಕೃಷಿ ಉತ್ಪನ್ನಗಳ ಮಾರಾಟವಾಗಲಿದೆ ಎಂದು ತಿಳಿಸಿದ್ದಾರೆ.