Job Description: * ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ ನಿಧಿ ಯೋಜನೆಯಡಿಯಲ್ಲಿ ಕರ್ನಾಟಕ ರಾಜ್ಯ ಕೃಷಿ ಇಲಾಖೆಗೆ ಪಿಎಂ ಕಿಸಾನ್ ಪ್ರಶಸ್ತಿ ಲಭಿಸಿದೆ. * ಕರ್ನಾಟಕ ರಾಜ್ಯ ಕೃಷಿ ಇಲಾಖೆಯು ಈ ಯೋಜನೆ ಅಡಿಯಲ್ಲಿ ಆಧಾರ್ ಜೋಡಣೆಯ ಬ್ಯಾಂಕ್ ಖಾತೆ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಮಾಡಿರುವದಕ್ಕಾಗಿ ಈ ಪ್ರಶಸ್ತಿ ಲಭಿಸಿದೆ. * ಕೇಂದ್ರ ಕೃಷಿ ಸಚಿವರಾದ ನರೇಂದ್ರ ಸಿಂಗ್ ತೋಮರ್'ರವರು ಕರ್ನಾಟಕ ರಾಜ್ಯ ಕೃಷಿ ಸಚಿವ ಬಿ.ಸಿ.ಪಾಟೀಲ್ ಹಾಗೂ ಇಲಾಖಾ ಅಧಿಕಾರಿಗಳಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಿದರು. * ಪ್ರಸ್ತುತ ಈ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ 2ನೇ ವರ್ಷದ ಸಂಭ್ರಮಾಚರಣೆ ಕಾರ್ಯಕ್ರಮವಾಗಿದೆ ಹಾಗೂ ಈ ಕಾರ್ಯಕ್ರಮವು ನವದೆಹಲಿಯ ಪೂಸಾದಲ್ಲಿ ಜರುಗಿತು. * ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ ಆದಾಯ ಕರ್ನಾಟಕ ರಾಜ್ಯವು ಶೇ.97 ರಷ್ಟು ಆಧಾರ ಜೋಡಣೆಯ ದತ್ತಾಂಶವನ್ನು ಹೊಂದಿದೆ ಎಂದು ತಿಳಿಸಿದ್ದಾರೆ. * ರಾಜ್ಯದ ಶೇಕಡಾ 90ಕ್ಕೂ ಹೆಚ್ಚು ಫಲಾನುಭವಿಗಳಿಗೆ ಆಧಾರ ಜೋಡಣೆ ಹೊಂದಿದ ಬ್ಯಾಂಕ್ ಖಾತೆಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗಿದೆ ಎಂದು ಕೃಷಿ ಸಚಿವ ಮಾಹಿತಿಯನ್ನು ನೀಡಿದರು.