Job Description: ಆದಾಯ ಮೀರಿ ಆಸ್ತಿ ಗಳಿಕೆ ವಿವಾದದಲ್ಲಿ ಕರ್ನಾಟಕದ ಜೈಲಿನಲ್ಲಿ ಒಟ್ಟು ನಾಲ್ಕು ವರ್ಷಗಳ ಸೆರೆವಾಸ ಅನುಭವಿಸಿ ಇತ್ತೀಚಿಗೆ ಬಿಡುಗಡೆಗೊಂಡ ಎಐಎಡಿಎಂಕೆ ಮಾಜಿ ನಾಯಕಿ ವಿ.ಕೆ. ಶಶಿಕಲಾ ನಟರಾಜನ್ ಅವರು ರಾಜಕೀಯ ನಿವೃತ್ತಿಯನ್ನು ಘೋಷಿಸಿದ್ದಾರೆ. * ಇವರು ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಅವರ ಅತ್ಯಾಪ್ತ ಗೆಳತಿಯಾಗಿದ್ದರು. * ಇನ್ನೇನು ಕೆಲವೇ ದಿನಗಳಲ್ಲಿ ತಮಿಳುನಾಡು ವಿಧಾನಸಭೆಗೆ ಚುನಾವಣೆ ನಡೆಯಲಿದ್ದು ಎಐಎಡಿಎಂಕೆ ಪಕ್ಷದ ನಾಯಕತ್ವವನ್ನು ಇವರು ವಹಿಸುತ್ತಾರೆಂದು ಊಹಿಸಲಾಗಿತ್ತಾದರೂ ಅವರ ಈ ನಡೆ ಕುತೂಹಲಕ್ಕೆ ಕಾರಣವಾಗಿದೆ.